ಬ್ರೇಕಿಂಗ್ ನ್ಯೂಸ್
14-04-21 10:35 pm Headline Karnataka News Network ದೇಶ - ವಿದೇಶ
ಮುಂಬೈ, ಎ 14: ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ದೊಡ್ಡಮಟ್ಟದ ಹೊಡೆತಕ್ಕೆ ನಲುಗಿರುವ ಮಹಾರಾಷ್ಟ್ರದಲ್ಲಿ ಇಂದು ರಾತ್ರಿ 8 ಗಂಟೆಯಿಂದಲೇ ಲಾಕ್ಡೌನ್ ಮಾದರಿಯ ನಿರ್ಬಂಧಗಳು ಜಾರಿಗೆ ಬಂದಿವೆ.
ಮೇ 1ರವರೆಗೆ ಜಾರಿಯಲ್ಲಿರುವ ಈ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಅಲ್ಲಿನ ಸರ್ಕಾರ 2 ಲಕ್ಷ ಪೊಲೀಸರನ್ನು ವಿವಿಧ ನಗರ, ಪಟ್ಟಣ, ಗ್ರಾಮಗಳಲ್ಲಿ ಬೀದಿಗಿಳಿಸಿದೆ. ಸೂಕ್ತ ಕಾರಣವಿಲ್ಲದೆ ಯಾರೊಬ್ಬರೂ ಬೀದಿಗಿಳಿಯುವಂತಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಲಾಕ್ಡೌನ್ ನಿಯಮಗಳನ್ನು ಪಾಲಿಸಿ ಎಂದು ಜನರಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಈ ಬಾರಿ ಅಧಿಕೃತವಾಗಿ ‘ಲಾಕ್ಡೌನ್’ ಪದ ಬಳಸಿಲ್ಲ. ಆದರೆ ನಿನ್ನೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ ಹಲವು ನಿರ್ಬಂಧಗಳು ಲಾಕ್ಡೌನ್ ಮಾದರಿಯಲ್ಲಿಯೇ ಇದ್ದವು. ಇಂದು ಮಹಾರಾಷ್ಟ್ರದ ಡಿಜಿಪಿ ಸಂಜಯ್ ಪಾಂಡೆ ಸಾರ್ವಜನಿಕರಿಗೆ ನೀಡಿರುವ ಸೂಚನೆಯಲ್ಲಿ ‘ಲಾಕ್ಡೌನ್’ ಪದವನ್ನು ಬಳಸಿದ್ದಾರೆ.
ಇಂದು ಸಂಜೆ 6.30ಕ್ಕೆ ಮುಂಬೈನ ಕೊಲಾಬದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಜಿಪಿ ಸಂಜಯ್ ಪಾಂಡೆ, ‘ನನ್ನ ಎಲ್ಲ ಸಿಬ್ಬಂದಿಗೂ ಗರಿಷ್ಠ ಸಂಯಮ ತೋರುವಂತೆ ತಿಳಿಸಿದ್ದೇನೆ. ಕಳೆದ ವರ್ಷದಂತೆ ಈ ವರ್ಷ ನಾವು ಯಾರಿಗೂ ಪಾಸ್ಗಳನ್ನು ವಿತರಿಸುತ್ತಿಲ್ಲ. ಸಾರ್ವಜನಿಕರು ರಾಜ್ಯದೊಳಗೆ ಸಂಚರಿಸುವ ವೇಳೆ, ಅಂತರರಾಜ್ಯ ಸಂಚಾರದ ವೇಳೆ ತಾವು ಅತ್ಯಗತ್ಯ ಕಾರಣಗಳಿಗಾಗಿ ಮನೆಯಿಂದ ಹೊರಗೆ ಬಂದಿದ್ದೇವೆ ಎಂಬುದುನ್ನು ಸಾಬೀತುಪಡಿಸಬೇಕು’ ಎಂದು ತಿಳಿಸಿದರು.
‘ಮಹಾರಾಷ್ಟ್ರದ ಜನತೆ ಲಾಕ್ಡೌನ್ ನಿಯಮಗಳನ್ನು ಗೌರವಿಸಬೇಕೆಂದು ನಾನು ವಿನಂತಿಸುತ್ತೇನೆ. ಲಾಕ್ಡೌನ್ ಜಾರಿ ವೇಳೆ ಭದ್ರತಾ ಸಿಬ್ಬಂದಿ ಗರಿಷ್ಠ ಮಟ್ಟದ ಸಂಯಮ ತೋರಿಸಲಿದ್ದಾರೆ ಎಂದು ನಾನು ಖಾತ್ರಿ ನೀಡುತ್ತೇನೆ. ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಒಟ್ಟು 2 ಲಕ್ಷ ಮಂದಿ ಲಾಕ್ಡೌನ್ ಜಾರಿಗಾಗಿ ಬೀದಿಗಿಳಿಯಲಿದ್ದಾರೆ. ಇದರ ಜೊತೆಗೆ ಹೆಚ್ಚುವರಿಯಾಗಿ 13,200 ಹೋಮ್ಗಾರ್ಡ್ಸ್, ರಾಜ್ಯ ಮೀಸಲು ಪೊಲೀಸ್ನ 22 ಕಂಪನಿಗಳು ಇಂದು ರಾತ್ರಿಯಿಂದ ಲಾಕ್ಡೌನ್ ಜಾರಿಗಾಗಿ ಕೆಲಸ ಮಾಡಲಿವೆ’ ಎಂದರು.
ಮಹಾರಾಷ್ಟ್ರದಲ್ಲಿ ಇಂದಿನಿಂದ ಎಲ್ಲವೂ ಸ್ಪಬ್ಧ:
\ಮಹಾರಾಷ್ಟ್ರ ಸರ್ಕಾರದ ಹೇಳಿಕೆಯ ಪ್ರಕಾರ ಅಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲ ರೀತಿಯ ಚಟುವಟಿಕೆಗಳು ಮತ್ತು ಸೇವೆಗಳನ್ನು ನಿರ್ಬಂಧಿಸಲಾಗಿದೆ. ಕೆಲಸದ ದಿನಗಳಂದು ಬೆಳಿಗ್ಗೆ 7ರಿಂದ ರಾತ್ರಿ 8ರವರೆಗೆ ಅತ್ಯವಶ್ಯಕ ಸೇವೆಗಳನ್ನು ಒದಗಿಸುವ ಕಚೇರಿಗಳು ಕಾರ್ಯನಿರ್ವಹಿಸುತ್ತವೆ. ಚಲನಚಿತ್ರ, ಧಾರಾವಾಹಿ ಮತ್ತು ಜಾಹೀರಾತು ಚಿತ್ರೀಕರಣವನ್ನು ನಿಷೇಧಿಸಲಾಗಿದೆ. ಮದುವೆಗಳಿಗೆ ಕೇವಲ 25 ಜನರು ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. ಸಾರ್ವಜನಿಕ ಸಾರಿಗೆ, ದಿನಸಿ-ತರಕಾರಿ ವ್ಯಾಪಾರ, ಆಹಾರ ಪದಾರ್ಥಗಳ ಮಾರಾಟ ಕೆಲ ನಿರ್ಬಂಧಗಳೊಂದಿಗೆ ಚಾಲ್ತಿಯಲ್ಲಿರುತ್ತದೆ.
ವಲಸೆ ಕಾರ್ಮಿಕರ ಪರದಾಟ
ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ಹಲವು ಪ್ರಮುಖ ನಗರಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ಹಿಂದಿರುಗಲು ಹಾತೊರೆಯುತ್ತಿದ್ದಾರೆ. ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಜನರು ಬುಧವಾರ ಸೇರಿದ್ದರು.
DGP Sanjay Pandey said a total of 2 lakh police personnel will be on the streets of Maharashtra to enforce the restrictions. An additional force of 13,200 home guards and 22 companies of State Reserve Police Force (SRPF), including 3 companies for Mumbai and 2 for Pune, will be deployed as per requirement.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm