ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್‌ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.

ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm