ಬ್ರೇಕಿಂಗ್ ನ್ಯೂಸ್
23-04-21 03:42 pm Headline Karnataka News Network ದೇಶ - ವಿದೇಶ
ನವದೆಹಲಿ,ಎ.23: ಕೊರೋನಾ ವೈರಸ್ ಮಹಾಮಾರಿ ಭಾರತದಲ್ಲಿ ಮತ್ತೊತಂದು ಜಾಗತಿಕ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,32,730 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,263 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,86,920ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,93,279 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,36,48,159ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 17,40,550 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,44,45,653 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,54,78,420 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಮತ್ತು ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಒಂದು ದಿನದಲ್ಲಿ ದಾಖಲಾದ ಹೊಸ ಪ್ರಕರಣಗಳು ದೇಶದ ಒಟ್ಟು ಪ್ರಕರಣಗಳು ಶೇ 75ರಷ್ಟಿದೆ ಎಂದು ಆರೋಗ್ಯ ಸಚಿವಾಲಯವು ಹೇಳಿದ್ದಾರೆ. ದೇಶದಲ್ಲಿ ನೀಡಲಾಗುವ ಕೊವಿಡ್ 19 ಲಸಿಕೆ ಪ್ರಮಾಣವು 13.53 ಕೋಟಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಏಪ್ರಿಲ್ 22 ರವರೆಗೆ 274,445,653 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಗುರುವಾರ 1,740,550 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾರತವು ಪ್ರಸ್ತುತ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ಎರಡನೇ ದೇಶವಾಗಿದ್ದು ಅಮೆರಿಕ ಮೊದಲ ಸ್ಥಾನದಲ್ಲಿದೆ.
India today logged over 3.32 lakh new Covid cases, once again the highest-ever daily count recorded in the world, and 2,263 deaths since yesterday. The alarming surge has led to desperate calls for oxygen from some of India's top hospitals.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm