ಬ್ರೇಕಿಂಗ್ ನ್ಯೂಸ್
05-05-21 05:45 pm Headline Karnataka News Network ದೇಶ - ವಿದೇಶ
Photo credits : ANI @ ANI
ಹೈದರಾಬಾದ್, ಮೇ 5: ನಗರದ ನೆಹರೂ ಜೈವಿಕ ಪಾರ್ಕ್‌ನಲ್ಲಿರುವ ಎಂಟು ಏಷ್ಯಾ ತಳಿಯ ಸಿಂಹಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳಾಗಿದ್ದವು. ಆದರೆ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ.
ಇದೇ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಸಿಂಹಗಳಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕೂಡ ಕಾಣಿಸಿಕೊಂಡಿದೆ. ಇದನ್ನು ಮುಂಚಿತವಾಗಿಯೇ ಗಮನಿಸಿದ ಮೃಗಾಲಯದ ಅಧಿಕಾರಿಗಳು ಏ.29ರಂದು ಸಿಂಹಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ್ದರು. ಅದರ ವರದಿ ಈಗ ಬಂದಿದ್ದು ಎಲ್ಲ ಸಿಂಹಗಳಲ್ಲೂ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ.
ಸೋಂಕಿತ ಸಿಂಹಗಳನ್ನು ಐಸೋಲೇಟ್ ಮಾಡಲಾಗಿದ್ದು, ರೋಗ ಲಕ್ಷಣಗಳಿಗೆ ತಕ್ಕಂತೆ ದಿನೇದಿನೆ ವಿವಿಧ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸಿಂಹಗಳು ಸದ್ಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿವೆ. ಪಾರ್ಕ್‌ನಲ್ಲಿ ಇತರ ಪ್ರಾಣಿಗಳು, ಅಧಿಕಾರಿಗಳು, ಸಿಬ್ಬಂದಿಗೆ ಕೊರೊನಾ ತಗುಲುವ ಆತಂಕ ನಿರ್ಮಾಣವಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸ್ಯಾನಿಟೈಸ್ ಮಾಡಿಸುವುದು, ಕಡ್ಡಾಯ ಮಾಸ್ಕ್ ಧಾರಣೆಯನ್ನು ತಪ್ಪದೇ ಪಾಲಿಸಲಾಗುತ್ತಿದೆ.
ಸಾರ್ವಜನಿಕರ ವೀಕ್ಷಣೆಗೆ ಹಲವು ದಿನಗಳಿಂದ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಮಾಂಸಾಹಾರಗಳನ್ನು ಶುದ್ಧೀಕರಿಸಿ, ಸೂಕ್ಷಾತ್ರ್ಮಣು ಜೀವಿಗಳ ಉಪಸ್ಥಿತಿಯ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಿಯೇ ನೀಡಲಾಗುತ್ತಿದೆ.
ಕಳೆದ ಏಪ್ರಿಲ್‌ನಲ್ಲಿ ನ್ಯೂಯಾರ್ಕ್ ನಗರದ ಮೃಗಾಲಯದಲ್ಲಿನ ಹುಲಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಮನುಷ್ಯನ ಮೂಲಕ ಪ್ರಾಣಿಗಳಿಗೆ ಕೊರೊನಾ ಸೋಂಕು ತಗುಲುತ್ತದೆ ಎಂದು ವನ್ಯಜೀವಿ ತಜ್ಞರು ಈಗಾಗಲೇ ಹಲವು ಬಾರಿ ಎಚ್ಚರಿಸಿದ್ದಾರೆ. ಕೊರೊನಾ ಸೋಂಕು ಇದ್ದರೂ ಕೆಲವರಲ್ಲಿಅದರ ಲಕ್ಷಣಗಳು ಗೋಚರಿಸುವುದಿಲ್ಲ. ಅಂಥವರಿಂದಲೇ ಪ್ರಾಣಿಗಳಿಗೆ ಕೊರೊನಾ ಶೀಘ್ರವಾಗಿ ತಗುಲುತ್ತದೆ ಎನ್ನಲಾಗಿದೆ.
Eight Asiatic lions at Hyderabad's Nehru Zoological Park have tested positive for Covid-19. This is the first case of lions or any other animals testing positive in an Indian zoo.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm