ರಾಸಾಯನಿಕ ಘಟಕದಲ್ಲಿ ಬಾಯ್ಲರ್‌ ಸ್ಫೋಟ: 4 ಸಾವು, 10 ಮಂದಿಗೆ ಗಾಯ

13-05-21 05:10 pm       Headline Karnataka News Network   ದೇಶ - ವಿದೇಶ

ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.

Photo credits : The Hindu

ತಮಿಳುನಾಡು,ಮೇ 13: ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.

ದುರಂತದಲ್ಲಿ  10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.

ಮೃತರ ಕುಟುಂಬದವರಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಘೋಷಿಸಿದ್ದಾರೆ.

In a major industrial mishap, four persons, three men and one woman, were killed and 10 others injured in a reactor vessel blast at a pesticides manufacturing industry in Kudikadu at the SIPCOT industrial estate in Cuddalore on Thursday.