ಬ್ರೇಕಿಂಗ್ ನ್ಯೂಸ್
01-08-20 06:37 am Headline Karnataka News Network ದೇಶ - ವಿದೇಶ
ನವದೆಹಲಿ: ಆ. 01: ಇಂದಿನಿಂದ ಮೂರನೇ ಹಂತದ ಅನ್ಲಾಕ್ ಜಾರಿ ಆಗುತ್ತಿದೆ. ಆದರೆ ಕೊರೊನಾ ಸೋಂಕು ಹರಡುವಿಕೆ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಕೊರೋನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ತೀವ್ರಗೊಂಡಾಗ ಅನ್ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕಳೆದ ಮೂರು ದಿನಗಳಿಂದ ಪ್ರತಿದಿನವೂ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುವ ಟ್ರೆಂಡ್ ಕೂಡ ಆರಂಭವಾಗಿದೆ.
ಹೀಗೆ ಮುಂದುವರಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನುಡಿದಿದ್ದ ಭವಿಷ್ಯದಂತೆ ಆಗಸ್ಟ್ 10ರೊಳಗೆ ದೇಶದ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷ ದಾಟಲಿದೆ. ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ದಾಖಲಾಗಿದ್ದವು. ನಂತರ ನೋಡನೋಡುತ್ತಿದ್ದಂತೆ ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದವು. ಅದಾದಮೇಲೆ ಜುಲೈ 20ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾದವು ಈಗ ಜುಲೈ 31ಕ್ಕೆ 57,117 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಶುಕ್ರವಾರ 764 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 36 ಸಾವಿರದ ಗಡಿ ದಾಟಿದ್ದು 36,511ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 10,94,374 ಜನ ಮಾತ್ರ. ದೇಶದಲ್ಲಿ ಇನ್ನೂ 5,65,103 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695, ಜುಲೈ 16ರಂದು 34,956, ಜುಲೈ 17ರಂದು 34,884, ಜುಲೈ 18ರಂದು 38,902, ಜುಲೈ 19ರಂದು 40,425, ಜುಲೈ 20ರಂದು 37,148, ಜುಲೈ 21ರಂದು 37,724, ಜುಲೈ 22ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916, ಜುಲೈ 25ರಂದು 48,661, ಜುಲೈ 26ರಂದು 49,931, ಜುಲೈ 27ರಂದು 47,704, ಜುಲೈ 28ರಂದು 48,512 ಹಾಗೂ ಜುಲೈ 29ರಂದು 52,123, ಜುಲೈ 30ರಂದು 55,079 ಹಾಗೂ ಜುಲೈ 31ರಂದು 57,117 ಹೊಸ ಪ್ರಕರಣಗಳು ಪತ್ತೆಯಾಗಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm