ಬ್ರೇಕಿಂಗ್ ನ್ಯೂಸ್
25-05-21 11:57 am Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಮೇ 25: ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಭಾಗದಲ್ಲಿ ವಾಯುಭಾರ ಕುಸಿತದಿಂದ ಯಾಸ್ ಚಂಡಮಾರುತ ಸೃಷ್ಟಿಯಾಗಿದ್ದು, ಮೇ 23ರಿಂದ ಮೇ 27ರವರೆಗೂ ಚಂಡಮಾರುತ ತನ್ನ ಆರ್ಭಟ ತೋರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಲಿದ್ದು, ಸೋಮವಾರ ರಾತ್ರಿಯೂ ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಿರುವುದಾಗಿ ಮಾಹಿತಿ ನೀಡಿದೆ.
ಸೋಮವಾರ ರಾತ್ರಿ 11.30ರ ನಂತರ ಒಡಿಶಾದ ಪಾರದೀಪ್ ದಕ್ಷಿಣ ಆಗ್ನೇಯ ಭಾಗದ 390 ಕಿ.ಮೀ ಕೇಂದ್ರದಲ್ಲಿ, ಬಾಲಾಸೋರ್‌ನ ದಕ್ಷಿಣ ಆಗ್ನೇಯದ 490 ಕಿ.ಮೀ ಕೇಂದ್ರದಲ್ಲಿ, ಪಶ್ಚಿಮ ಬಂಗಾಳದ ದಿಗಾದಲ್ಲಿನ ದಕ್ಷಿಣ ಆಗ್ನೇಯ ದಿಕ್ಕಿನ 470 ಕಿ.ಮೀ ಕೇಂದ್ರದಲ್ಲಿ ಹಾಗೂ ಬಾಂಗ್ಲಾದೇಶದ ಖೇಪುಪಾರಾದ 500 ಕಿ.ಮೀ ಕೇಂದ್ರಿತವಾಗಿ ಚಂಡಮಾರುತದ ಪ್ರಭಾವ ಗೋಚರಿಸಿರುವುದಾಗಿ ಇಲಾಖೆ ತಿಳಿಸಿದೆ.
ಮುಂದಿನ ಕೆಲವು ಗಂಟೆಗಳಲ್ಲಿ ತೀವ್ರಗೊಳ್ಳಲಿದೆ ಚಂಡಮಾರುತ
ಮುಂದಿನ ಕೆಲವು ಗಂಟೆಗಳಲ್ಲಿ ಚಂಡಮಾರುತ ಉತ್ತರ ವಾಯವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂದು ಇಲಾಖೆ ತಿಳಿಸಿದೆ. ಬುಧವಾರ ಬೆಳಿಗ್ಗೆ ಪಶ್ಚಿಮ ಬಂಗಾಳ ಕರಾವಳಿ ಪ್ರದೇಶಗಳು ಹಾಗೂ ಉತ್ತರ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ. ಚಂಡಮಾರುತದಿಂದ ಉತ್ತರ ಒಡಿಶಾದ ಜಿಲ್ಲೆಗಳು, ವಿಶೇಷವಾಗಿ ಮಯೂರ್‌ಭಂಜ್, ಭದ್ರಾಕ್ ಮತ್ತು ಬಾಲಸೋರ್ ಜಿಲ್ಲೆಗಳು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ. ಚಂಡಮಾರುತದಿಂದಾಗಿ ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮೇ 26ರಂದು ಚಂಡಮಾರುತದಿಂದ ಹೆಚ್ಚಿನ ಹಾನಿ
ಚಂಡಮಾರುತದಿಂದಾಗಿ ಉತ್ತರ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಮೇ 26ರಂದು ಹೆಚ್ಚಿನ ಹಾನಿಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದು ಉತ್ತರ ಒಡಿಶಾ - ಪಶ್ಚಿಮ ಬಂಗಾಳ ಹಾದು ಪಾರದೀಪ್ ಮತ್ತು ಸಾಗರ ದ್ವೀಪಗಳ ನಡುವೆ ಮೇ 26ಕ್ಕೆ ತಲುಪಿ ಗಂಭೀರ ಸ್ವರೂಪ ಪಡೆಯಲಿದೆ ಎಂದು ತಿಳಿಸಿದ್ದಾರೆ.
ಒಡಿಶಾದಲ್ಲಿ ಅಬ್ಬರದ ಮಳೆ ಸೂಚನೆ
ಪುರಿ, ಜಗತ್‌ಸಿಂಗ್ ಪುರ, ಖರ್ದಾ, ಕಟಕ್, ಕೇಂದ್ರಪಾರಾ, ಜೈಪುರ, ಭಾದ್ರಾಕ್, ಬಾಲಸೋರ್ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಲಿದೆ. ಪ್ರವಾಹ ಉಂಟಾಗುವ ಸೂಚನೆಯಿಂದೆ ಎಂದು ಇಲಾಖೆ ತಿಳಿಸಿದೆ. ಗಂಜಾಂ, ಧೆಂಕಾಲನ್, ಮಯೂರ್ ಬಂಜ್ ಜಿಲ್ಲೆಗಳಲ್ಲಿ ದಾಖಲೆಯ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯಗಳಲ್ಲಿ ಎನ್‌ಡಿಆರ್‌ಎಫ್ ತಂಡ
ಚಂಡಮಾರುತ ಪ್ರಭಾವ ತೀವ್ರಗೊಳ್ಳಲಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಕಳುಹಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 35 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಚಂಡಮಾರುತದ ಪ್ರಭಾವ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿಯೂ ಹೆಚ್ಚಾಗುವ ನಿರೀಕ್ಷೆಯಿದ್ದು ಎನ್‌ಡಿಆರ್‌ಎಫ್ ಪಡೆ ಸನ್ನದ್ಧವಾಗಿದೆ.
Tropical Cyclone Yaas Live Location, Super Cyclone Yaas Latest Update Live: Cyclone Yaas, which is predicted to make landfall sometime on Wednesday afternoon in Odisha, has intensified into a severe cyclonic storm. The Indian Meteorological Department says that at the time of the landfall, Cyclone Yaas is likely to be in the ‘very severe cyclonic storm’ category.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm