ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.
ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm