ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am