ಬ್ರೇಕಿಂಗ್ ನ್ಯೂಸ್
01-07-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 1: ಜಮ್ಮುವಿನ ವಾಯುನೆಲೆಗೆ ಡ್ರೋಣ್ ದಾಳಿ ನಡೆಸಿದ ಬೆನ್ನಲ್ಲೇ ದೇಶದಲ್ಲಿ ಡ್ರೋಣ್ ಬಳಕೆ ವಿಚಾರದಲ್ಲಿ ಕಟ್ಟುನಿಟ್ಟು ತರಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಭದ್ರತೆ ವಿಚಾರ ಮುಂದಿಟ್ಟು ಡ್ರೋಣ್ ನೀತಿಯನ್ನು ರೂಪಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಜಮ್ಮು ವಾಯುನೆಲೆಯ ಮೇಲೆ ಡ್ರೋಣ್ ದಾಳಿ ಮತ್ತು ನಂತರದ ಘಟಾನವಳಿ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ನಾಗರಿಕ ಬಳಕೆಗಾಗಿ ಡ್ರೋಣ್ ಕ್ಯಾಮರಾ ಬಳಕೆ ಮತ್ತು ಅದರ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್‌ಗಳ ಬಳಕೆಯ ಮೇಲೆ ನಿರ್ಬಂಧ ವಿಧಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ 2021 ರ ಮಾರ್ಗಸೂಚಿ ಪ್ರಕಾರ, 250 ಗ್ರಾಂ ಗಿಂತ ಕಡಿಮೆ ತೂಕದ ಡ್ರೋನ್‌ಗಳನ್ನು ಹಾರಲು ಯಾವುದೇ ಪರವಾನಗಿ ಅಥವಾ ಪರವಾನಗಿ ಅಗತ್ಯವಿಲ್ಲ. ಆದರೆ, ವಿಮಾನ ನಿಲ್ದಾಣ, ಬಂದರು ಸೇರಿದಂತೆ ಕೆಲವು ನಿರ್ಬಂಧಿತ ಪ್ರದೇಶಗಳಲ್ಲಿ ಡ್ರೋಣ್ ಹಾರಾಟಕ್ಕೆ ಅನುಮತಿ ಇಲ್ಲ.
ಜಮ್ಮುವಿನ ಐಎಎಫ್ ವಾಯುನೆಲೆಯ ಮೇಲೆ ಭಾನುವಾರ ನಸುಕಿನಲ್ಲಿ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸಿದ್ದರು. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಯೋಧರು ಗಾಯಕ್ಕೆ ಒಳಗಾಗಿದ್ದರು. ಈ ದಾಳಿ, 2016ರ ಪಠಾಣ್ ಕೋಟ್ ವಾಯನೆಲೆ ದಾಳಿಯ ಮುಂದುವರಿಕೆ ಎನ್ನಲಾಗುತ್ತಿದ್ದು, ಇದರ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇರುವ ಶಂಕೆ ಇದೆ ಎಂದು ಗುಪ್ತಚರ ಇಲಾಖೆ ಉನ್ನತ ಮೂಲಗಳು ತಿಳಿಸಿದ್ದವು. ಇದರ ಬೆನ್ನಿಗೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು.
ಇದರ ಬೆನ್ನಲ್ಲೇ ಒಂದು ದಿನದ ನಂತರ, ಜಮ್ಮು ಸೇನಾ ನೆಲೆಯ ಬಳಿ ಮತ್ತೆರಡು ಡ್ರೋಣ್ ಬಂದಿದ್ದು ಅವನ್ನು ಸೈನಿಕರು ಹೊಡೆದುರುಳಿಸಿದ್ದರು. ಈ ಹಿನ್ನೆಲೆಯಲ್ಲಿ ಡ್ರೋಣ್ ಬಳಕೆ ಮತ್ತು ಅದರ ಮೇಲೆ ದೇಶಾದ್ಯಂತ ಕಣ್ಣಿಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
Prime Minister Narendra Modi Tuesday chaired a high-level meeting with Defence Minister Rajnath Singh, Union Home Minister Amit Shah, and NSA Ajit Doval on “futuristic challenges” in the defense sector. A discussion on equipping Indian armed forces with modern pieces of equipment was also held during the meeting.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am