ಬ್ರೇಕಿಂಗ್ ನ್ಯೂಸ್
09-07-21 10:49 am Source: kannada.drivespark ದೇಶ - ವಿದೇಶ
ಹೆಚ್ಚುತ್ತಿರುವ ಇಂಧನಗಳ ಬೆಲೆಗಳ ಪರಿಣಾಮ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಸಹ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ವರ್ಷಕ್ಕಿಂತಲೂ ಇದೀಗ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ.
ದೇಶಿಯ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಕಾರುಗಳ ಪೈಕಿ ಟಾಟಾ ನೆಕ್ಸಾನ್, ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟಕ್ಕೆ ಹೋಲಿಕೆ ಮಾಡಿದರೆ ಇದು ಶೇ. 1ರಷ್ಟಿಲ್ಲವಾದರೂ ಇತ್ತೀಚೆಗೆ ಇವಿ ವಾಹನ ಖರೀದಿದಾರರ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ ಪ್ರಥಮ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಎಂಜಿ ಜೆಡ್ಎಸ್, ಮೂರನೇ ಸ್ಥಾನದಲ್ಲಿ ಹ್ಯುಂಡೈ ಕೊನಾ ಮಾರಾಟಗೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳು ಜೂನ್‌ನಲ್ಲಿ 650 ಯುನಿಟ್ ನೆಕ್ಸಾನ್ ಇವಿ ಮಾರಾಟಗೊಳಿಸಿದ್ದು, ಕಳೆದ ಜನವರಿಯಿಂದ ನೆಕ್ಸಾನ್ ಇವಿ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಾಣುತ್ತಿದೆ. ಜೊತೆಗೆ ಕಂಪನಿಯು ಇದೇ ಮೊದಲ ಬಾರಿಗೆ ತಿಂಗಳ ಕಾರು ಮಾರಾಟದಲ್ಲಿ ಅತಿ ಹೆಚ್ಚು ಬೇಡಿಕೆ ದಾಖಲಿಸಿದೆ.
ಇವಿ ವಾಹನಗಳ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ತಂತ್ರಜ್ಞಾನ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನಗಳ ಮೇಲೆ ಗರಿಷ್ಠ ಎಂಟು ವರ್ಷಗಳ ವಾರಂಟಿ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಪಡೆದುಕೊಂಡಿದೆ. ಎಆರ್‌ಎಐ ಪ್ರಮಾಣೀಕರಿಸಿರುವಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
ಇನ್ನು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿರುವ ಎಂಜಿ ಮೋಟಾರ್ ನಿರ್ಮಾಣದ ಜೆಡ್ಎಸ್ ಇವಿ ಕೂಡಾ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಜೂನ್ ಅವಧಿಯಲ್ಲಿ 250 ಯನಿಟ್ ಮಾರಾಟಗೊಂಡಿದೆ. ಜೆಡ್ಎಸ್ ಇವಿ ಕಾರು ಬಿಡುಗಡೆಗೊಂಡ ಮೊದಲ ವರ್ಷದ ಅವಧಿಯಲ್ಲಿ ಒಟ್ಟು 1,500 ಯುನಿಟ್ ಮಾರಾಟಗೊಂಡಿದ್ದು, ಇದೀಗ 2021ರ ಆವೃತ್ತಿಯ ಮೂಲಕ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್‌ನಲ್ಲಿ ಮಾರಾಟಗೊಳ್ಳುತ್ತಿದೆ.

ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಇವಿ ಕಾರು ಮಾದರಿಯನ್ನು ಮೊದಲ ಬಾರಿಗೆ 2020ರ ಫೆಬ್ರವರಿಯಲ್ಲಿ ಬಿಡುಗಡೆಗೊಳಿಸಿದ್ದ ಸಂದರ್ಭದಲ್ಲಿ 44.5 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತಿತ್ತು.
ಆದರೆ ಇದೀಗ 2021ರ ಜೆಡ್ಎಸ್ ಇವಿ ಮಾದರಿಯಲ್ಲಿ ಈ ಹಿಂದಿನ 44.5 kWh ಬ್ಯಾಟರಿ ಪ್ಯಾಕ್ ಮಾದರಿಯನ್ನೇ ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗಿದ್ದು, ಪ್ರಸ್ತುತ ಮಾದರಿಯು ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹೊಂದಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20,99,800 ಮತ್ತು ಟಾಪ್ ಎಂಡ್ ಮಾದರಿಗೆ ರೂ. 24,18,000 ಬೆಲೆ ಹೊಂದಿದೆ.

ಇನ್ನು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಕೊನೆಯ ಸ್ಥಾನದಲ್ಲಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯು ಜೂನ್ ಅವಧಿಯಲ್ಲಿ 7 ಯುನಿಟ್ ಮಾರಾಟಗೊಂಡಿದ್ದು, ಕೊನಾ ಇವಿ ಕಾರು ಬಿಡುಗಡೆಗೊಂಡ ನಂತರ ಇದುವರೆಗೆ 150 ಯುನಿಟ್ ಮಾತ್ರ ಮಾರಾಟಗೊಂಡಿದೆ.
ಮಾರುಕಟ್ಟೆಯಲ್ಲಿರುವ ಪ್ರತಿ ಸ್ಪರ್ಧಿ ಮಾದರಿಗಳಿಂತಲೂ ತುಸ ದುಬಾರಿಯಾದರೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್ ಹೊಂದಿರುವ ಕೊನಾ ಇವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷ ಬೆಲೆ ಹೊಂದಿದೆ. ಕೊನಾ ಇವಿ ಕಾರಿನಲ್ಲಿ 39.2kWh ಬ್ಯಾಟರಿ ಜೋಡಣೆ ಮಾಡಲಾಗಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.
ಇನ್ನುಳಿದಂತೆ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಟಿಗೋರ್ ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಎಲೆಕ್ಟ್ರಿಕ್ ವಾಹನ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚುತ್ತಿದೆ. ಜೊತೆಗೆ ಹೆಚ್ಚುತ್ತಿರುವ ಇಂಧನ ಬೆಲೆ ಪರಿಣಾಮದಿಂದಲೂ ತತ್ತರಿಸಿರುವ ವಾಹನ ಮಾಲೀಕರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿರುವುದು ಉತ್ತಮ ಬೆಳವಣಿಗೆ ಎನ್ನಬಹುದು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am