ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್‌ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್‌ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm