ಬ್ರೇಕಿಂಗ್ ನ್ಯೂಸ್
16-07-21 11:37 am Headline Karnataka News Network ದೇಶ - ವಿದೇಶ
Photo credits : ANI @ ANI
ಭೋಪಾಲ್, ಜುಲೈ 16: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ ಆವರಣ ಗೋಡೆ ಕುಸಿದು 30ಕ್ಕೂ ಹೆಚ್ಚು ಮಂದಿ ಬಾವಿಯೊಳಗೆ ಬಿದ್ದು ದುರಂತಕ್ಕೀಡಾದ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದ ಗಂಜ್ ಬಸೋದಾ ಎಂಬಲ್ಲಿ ಘಟನೆ ನಡೆದಿದೆ. ಬಾವಿಗೆ ಬಿದ್ದ 30ಕ್ಕೂ ಹೆಚ್ಚು ಜನರ ಪೈಕಿ ನಾಲ್ವರು ಮೃತಪಟ್ಟಿದ್ದು, 19 ಜನರನ್ನು ರಕ್ಷಿಸಲಾಗಿದೆ. ಇನ್ನೂ 13 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ಬಾವಿಗೆ ಬಿದ್ದಿದ್ದಳು. ಬಾಲಕಿಯ ರಕ್ಷಿಸುವುದಕ್ಕಾಗಿ ಕೆಲವರು ಬಾವಿಗೆ ಇಳಿದರೆ ಇತರರು ಸಹಾಯ ಮಾಡುವುದಕ್ಕಾಗಿ ಸುತ್ತಲಿನ ಆವರಣ ಗೋಡೆಯ ಮೇಲೆ ನಿಂತಿದ್ದರು. ಆದರೆ, ಆವರಣ ಗೋಡೆ ಭಾರ ತಾಳಲಾರದೆ ದಿಢೀರ್ ಕುಸಿದಿದ್ದು, ಅದರ ಮೇಲೆ ನಿಂತವರೆಲ್ಲ ಬಾವಿಗೆ ಬಿದ್ದಿದ್ದಾರೆ. ಈ ಪೈಕಿ ಕೆಲವರು ಗೋಡೆಯ ಅವಶೇಷಗಳಡಿ ಸಿಲುಕಿದರೆ, ಒಳಗಿದ್ದವರು ಗೋಡೆಯ ಕಲ್ಲುಗಳು ತಲೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾತ್ರಿ 11 ಗಂಟೆ ವೇಳೆಗೆ ಟ್ರ್ಯಾಕ್ಟರ್ ಬಳಸಿ ಬಾವಿಗೆ ಬಿದ್ದವರ ರಕ್ಷಣಾ ಕಾರ್ಯಾಚರಣೆ ಶುರು ಮಾಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಕುರಿತು ಸಚಿವ ವಿಶ್ವಾಸ್ ಸಾರಂಗ್ ಸ್ಪಷ್ಟನೆ ನೀಡಿದ್ದು ಈವರೆಗೆ 19 ಜನರನ್ನು ರಕ್ಷಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯೂ ಸ್ಥಳಕ್ಕೆ ಬಂದಿದ್ದು, ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಇಂಥ ಘಟನೆಗಳು ಮರುಕಳಿಸುತ್ತಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳುವ ತನಕ ಕಾರಣ ಹೇಳುವುದಕ್ಕೆ ಸಾಧ್ಯವಾಗದು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ಮಧ್ಯಪ್ರದೇಶದ ಗಂಜ್ ಬಸೋದಾದಲ್ಲಿ ನಡೆದಿರುವ ಘಟನೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂತಾಪ ಸೂಚಿಸಿದ್ದಾರೆ. ಬಾವಿಗೆ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಹಾಗೂ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
Around 30 people fell into a well in Madhya Pradesh's Vidisha on Thursday. While more than 15 people have been rescued, the search is on for those missing.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am