ಬ್ರೇಕಿಂಗ್ ನ್ಯೂಸ್
28-07-21 03:25 pm Mangalore Correspondent ದೇಶ - ವಿದೇಶ
ಶ್ರೀನಗರ, ಜುಲೈ 28: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಜಮ್ಮುವಿನ ಸುತ್ತ ಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕಣಿವೆ ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಅಗತ್ಯಬಿದ್ದರೆ ಸೇನಾ ಹೆಲಿಕಾಪ್ಟರ್ ಗಳನ್ನೂ ಕೂಡ ಕಾರ್ಯಾಚರಣೆಗೆ ಇಳಿಸಲಾಗುತ್ತದೆ. ಈ ಕುರಿತಂತೆ ಡಿಎಂ ಅಶೋಕ್ ಶರ್ಮಾ ಅವರೊಂದಿಗೆ ತಾವು ಮಾತನಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಸಿಬ್ಬಂದಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ 4 ಮೃತದೇಹಳು ಪತ್ತೆಯಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ ಎಂದು ತಿಳಿದುಬಂದಿದೆ.
ನಾಪತ್ತೆಯಾಗಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ಇಳಿಜಾರು ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
At least seven bodies were recovered and many reported to be missing after a cloud burst over Honjar village in Kishtwar district in Jammu region early Wednesday. Authorities said 17 persons have been rescued so far as the search operation continues.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am