ಬ್ರೇಕಿಂಗ್ ನ್ಯೂಸ್
31-07-21 02:17 pm Mangaluru Correspondent ದೇಶ - ವಿದೇಶ
ಮಂಗಳೂರು, ಜುಲೈ 31: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡುವ ಜನರಿಗೆ ಹೆಚ್ಚುವರಿ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕಕ್ಕೆ ಗಡಿಭಾಗದಿಂದ ರಸ್ತೆ ಮೂಲಕ ಅಥವಾ ರೈಲು, ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಮಾಡಿರುವ ಆರ್ ಟಿಪಿಸಿಆರ್ ಪರೀಕ್ಷೆ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ಬಾರಿ ಒಂದು ಡೋಸ್ ಪಡೆದಿದ್ದ ಪ್ರಯಾಣಿಕರಿಗೆ ರಿಯಾಯಿತಿ ಕೊಡಲಾಗಿತ್ತು. ಈ ಬಾರಿ ಎರಡು ಡೋಸ್ ಲಸಿಕೆ ಪಡೆದಿದ್ದರೂ, ಕೋವಿಡ್ ನೆಗೆಟಿವಿ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ರೈಲು ಮತ್ತು ವಿಮಾನದಲ್ಲಿ ಬರುವ ಪ್ರಯಾಣಿಕರಿಗೆ ಆಯಾ ಭಾಗದಲ್ಲಿ ಟಿಕೆಟ್ ದೃಢಪಡಿಸುವ ವೇಳೆಯಲ್ಲೇ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ರೈಲಿನಲ್ಲಿ ಟಿಕೆಟ್ ಪಡೆದು ಪ್ರಯಾಣಿಸುವವರನ್ನು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಇರುವುದನ್ನು ದೃಢೀಕರಿಸುವುದು ರೈಲ್ವೇ ಇಲಾಖೆಯ ಜವಾಬ್ದಾರಿಯಾಗಿರುತ್ತದೆ.





ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರನ್ನು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರೆಯೇ ಎಂಬುದನ್ನು ಆಯಾ ಬಸ್ಸಿನ ನಿರ್ವಾಹಕರೇ ಖಚಿತಪಡಿಸಿಕೊಳ್ಳಬೇಕು. ಕೇರಳದಿಂದ ಶಿಕ್ಷಣ, ಉದ್ಯೋಗ ಇನ್ನಿತರ ಕೆಲಸಗಳಿಗಾಗಿ ಕರ್ನಾಟಕ ಪ್ರವೇಶ ಮಾಡುವವರು 15 ದಿನಗಳಿಗೊಮ್ಮೆ ಆರ್ ಟಿಪಿ ಸಿಆರ್ ಟೆಸ್ಟ್ ಮಾಡಿಕೊಳ್ಳಬೇಕು. ಕೇರಳಕ್ಕೆ ಹೊಂದಿಕೊಂಡಿರುವ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರಿನಲ್ಲಿ ಆಯಾ ಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಪೊಲೀಸರು ಪ್ರಯಾಣಿಕರು ಮತ್ತು ಖಾಸಗಿ ವಾಹನಗಳ ಚಾಲಕರ ಮೇಲೆ ನಿಗಾ ಇಡಬೇಕು. ಈ ಜವಾಬ್ದಾರಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇರುತ್ತದೆ.
ಉಳಿದಂತೆ, ಸಾಂವಿಧಾನಿಕ ಕರ್ತವದಲ್ಲಿ ತೊಡಗಿರುವ ಅಧಿಕಾರಿಗಳು, ವೈದ್ಯಕೀಯ ಸಿಬಂದಿಗಳು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಕುಟುಂಬಸ್ಥರ ಮರಣ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ ತುರ್ತು ಕಾರಣಗಳಿಗೆ ಪ್ರಯಾಣಿಸುವವರಿಗೆ ಕೋವಿಡ್ ನೆಗೆಟಿವ್ ನಿರ್ಬಂಧ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
COVID-19 negative certificate from an RT-PCR test will be made mandatory for people coming from Kasaragod in Kerala into Dakshina Kannada orders DC of Mangalore Dr Rajendra Kumar. Following an alarming surge in daily COVID-19 cases, the Kerala government on Thursday (July 29, 2021) announced that it will impose a complete weekend lockdown on July 31, 2021 and August 1, 2021. Some of the worst affected districts in Kerala are Malappuram, Thrissur, Kozhikode, Ernakulam, Palakkad, Kollam, Alappuzha, Kannur, Thiruvananthapuram and Kottayam.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am