ಬ್ರೇಕಿಂಗ್ ನ್ಯೂಸ್
10-08-21 12:17 pm Headline Karnataka News Network ದೇಶ - ವಿದೇಶ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.
ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ashwani upadhyay and others involved in yesterdays incident to be arrested delhi police
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm