ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm