ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm