ಬ್ರೇಕಿಂಗ್ ನ್ಯೂಸ್
26-08-21 01:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ಯಾನೆಲ್ ಶಿಫಾರಸು ಮಾಡಿರುವ ಒಂಬತ್ತು ಮಂದಿ ನ್ಯಾಯಾಧೀಶರ ಪಟ್ಟಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ. ಎಲ್ಲವೂ ಅಂದ್ಕೊಂಡಂತೇ ಆದರೆ, 2027ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಆ ಹೆಗ್ಗಳಿಕೆ ಕರ್ನಾಟಕದ ಕನ್ನಡಿಗ ಮಹಿಳೆಯೊಬ್ಬರಿಗೆ ಸಿಗಲಿದೆ ಎನ್ನುವುದು ಮಹತ್ವದ ಅಂಶ.

ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎ.ಎಸ್.ಓಕಾ, ನ್ಯಾಯಾಧೀಶೆ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟಿನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶೆ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟಿನ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟಿನ ಎಂ.ಎಂ.ಸುಂದರೇಶ್, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಬೇಳ ಎಂ. ತ್ರಿವೇದಿ ಮತ್ತು ಹಿರಿಯ ವಕೀಲರಾಗಿರುವ ಪಿ.ಎಸ್. ನರಸಿಂಹ ಅವರನ್ನು ಕೊಲಿಜಿಯಂ ಸುಪ್ರೀಕೋರ್ಟಿಗೆ ಶಿಫಾರಸು ಮಾಡಿತ್ತು.
ಪ್ರಸಕ್ತ ಸುಪ್ರೀಂ ಕೋರ್ಟ್ ನಲ್ಲಿ 24 ಮಂದಿ ನ್ಯಾಯಾಧೀಶರಿದ್ದಾರೆ. ಈಗ ಒಂಬತ್ತು ಮಂದಿಯ ಸೇರ್ಪಡೆಯಾಗಿದ್ದು, ಇನ್ನೊಂದು ಸ್ಥಾನ ಖಾಲಿಯಿದೆ. ಈಗ ಶಿಫಾರಸು ಆಗಿರುವ ಮೂವರು ಮಹಿಳಾ ನ್ಯಾಯಾಧೀಶರಲ್ಲಿ ಬಿ.ವಿ.ನಾಗರತ್ನ ಹಿರಿಯರಾಗಿದ್ದು, 2027ರಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿದ್ದಾರೆ. ಅದಲ್ಲದೆ, ಮೊಟ್ಟಮೊದಲ ಬಾರಿಗೆ ಮಹಿಳೆಯೊಬ್ಬರು ನ್ಯಾಯಾಂಗದ ಅತ್ಯುನ್ನತ ಸ್ಥಾನ ಅಲಂಕರಿಸಲಿದ್ದಾರೆ.

1950, ಜನವರಿ 26ರಂದು ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 70 ವರ್ಷಗಳಲ್ಲಿ ಕೇವಲ ಎಂಟು ಮಂದಿ ಮಹಿಳೆಯರಷ್ಟೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. 1989ರಲ್ಲಿ ಫಾತಿಮಾ ಬೀವಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಪೀಠದಲ್ಲಿ ನ್ಯಾಯಾಧೀಶ ಹುದ್ದೆಗೇರಿದ್ದರು.
1962, ಅಕ್ಟೋಬರ್ 30ರಂದು ಜನಿಸಿದ್ದ ಬಿ.ವಿ.ನಾಗರತ್ನ, ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಇ.ಎಸ್.ವೆಂಕಟ್ರಾಮಯ್ಯ ಅವರ ಪುತ್ರಿ. 1987ರ ಅಕ್ಟೋಬರ್ 28ರಂದು ಬೆಂಗಳೂರು ಹೈಕೋರ್ಟಿನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು.
The Centre has approved all nine names recommended by the Supreme Court Collegium for appointment to the top court. Among the approved names is Justice Nagarathna, who can go on to become the country’s first woman CJI in 2027
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am