ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್‍ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್‍ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‍ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‍ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್‍ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್‌ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm