ಬ್ರೇಕಿಂಗ್ ನ್ಯೂಸ್
11-09-21 05:29 pm Headline Karnataka News Network ದೇಶ - ವಿದೇಶ
ದೆಹಲಿ, ಸೆ.11 :ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯ ಮೇಲೆ ಮಳೆಯ ನೀರು ನಿಂತು ಸಂಚಾರಕ್ಕೆ ಅಡಚಣೆಯನ್ನುಂಟು ಮಾಡಿದೆ. ಬೆಳಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ನಗರದ ವಾತಾವರಣವನ್ನು ಸಂಪೂರ್ಣವಾಗಿ ಬದಲಾಯಿಸಿದೆ.
ಭಾರೀ ಮಳೆಯಿಂದಾಗಿ ನಗರದ ಐಐಟಿ ಗೇಟ್ ಬಳಿಯ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆಯುಂಟಾಗಿದ್ದು, ನಿಧಾನಗತಿಯ ಟ್ರಾಫಿಕ್ ಚಲನೆ ಇರುವುದರಿಂದ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.
1975ರಲ್ಲಿ ಇದೇ ರೀತಿ ದೆಹಲಿಯಲ್ಲಿ ಅತಿಹೆಚ್ಚು ಮಳೆಯಾಗಿತ್ತು. ಅಂದು 1.150 ಮಿಮೀ ಮಳೆಯಾಗಿತ್ತು. ಈ ಬಾರಿ 1,00 ಮಿಮೀ ಮಳೆಯಾಗಿದೆ. ಶನಿವಾರ ಬೆಳಗ್ಗೆಯೇ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಮಳೆಗಾಲ ಮುಗಿಯುವ ಮುನ್ನವೇ ಈ ಬಾರಿ ಭಾರೀ ಮಳೆಯಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ 648.9 ಮಿಮೀ ಮಳೆ ನಿರೀಕ್ಷೆ ಮಾಡಲಾಗುವುದು ಎಂದು ಐಎಂಡಿ ತಿಳಿಸಿದೆ.


ಭಾರೀ ಮಳೆಯಿಂದ ವಿಮಾನ ಸಂಚಾರ ರದ್ದುಗೊಂಡಿದೆ. ಇನ್ನು 38 ಜನ ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ವಿಮಾನವೊಂದು ಮಳೆಯಿಂದಾಗಿ, ಪಲಂ ಪ್ಲೈಓವರ್ ಬಳಿ ಸಿಲುಕಿಕೊಂಡಿತು. ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ವಾಹನ ಪ್ರಯಾಣಿಕರ ರಕ್ಷಣೆ ಮಾಡಿದೆ.
ಗುರುಗಾವ್ನ ರಾಷ್ಟ್ರೀಯ ಹೆದ್ದಾರಿ 48 ಕೂಡ ಸಂಪೂರ್ಣವಾಗಿ ಜಲಾವೃತ್ಒಂಡಿದೆ. ಇಲ್ಲೂ ಕೂಡ ಟ್ರಾಫಿಕ್ ಸಮಸ್ಯೆಯಿಂದ ಜನರು ಸಂಕಷ್ಟ ಅನುಭವಿಸಿದರು. ರಾಣಿ ಖೇಡಾ ಅಂಡರ್‌ಪಾಸ್‌ನಲ್ಲಿ 3-4 ಅಡಿ ನೀರು ನಿಂತ ಪರಿಣಾಮ ಟ್ರಾಫಿಕ್ ಉಲ್ಬಣಗೊಂಡಿದೆ.
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 97 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮೋಡ ಕವಿದ ವಾತಾವರಣವನ್ನು ಊಹಿಸಲಾಗಿತ್ತು. ಜೊತೆಗೆ ನಗರದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




ಶುಕ್ರವಾರ ಬೆಳಿಗ್ಗೆ 8.30 ರಿಂದ ಶನಿವಾರ ಬೆಳಿಗ್ಗೆ 8.30 ರ ನಡುವೆ 94.7 ಮಿಮೀ ಮಳೆಯಾಗಿದೆ. ಶನಿವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ ಎಂದು ಸಫ್ದರ್‌ಜಂಗ್ ವೀಕ್ಷಣಾಲಯ ತಿಳಿಸಿದೆ.
ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತಿದೆ. ಅನೇಕ ಅಂಡರ್ಪಾಸ್ಗಳನ್ನು ನೀರು ನದಿಯಂತೆ ಹರಿಯುತ್ತಿದೆ. ಈ ಹಿನ್ನಲೆ ವಾಹನ ಸಂಚಾರಿಗಳು ಸಾಕಷ್ಟು ಸಮಸ್ಯೆ ಅನುಭವಿಸುವಂತೆ ಆಗಿದೆ.


ಇನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಕೂಡ ನೀರು ನುಗ್ಗಿದ ಪರಿಣಾಮ ಜನರು ಸಾಕಷ್ಟು ಸಮಸ್ಯೆ ಅನುಭವಿಸುವಂತೆ ಆಗಿದೆ. ಸ್ಪೈಸ್ ಜೆಟ್ ವಿಮಾನ ನಿಲ್ದಾಣ ಸ್ಥಳಗಳಲ್ಲಿ ನೀರು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ದೆಹಲಿಯ ಕೆಲವು ಸ್ಥಳಗಳಲ್ಲಿ ಅಂದರೆ , ಅಕ್ಷರಧಾಮ, ಶಹಾದ್ರಾ, ಪ್ರೀತ್ ವಿಹಾರ್, ಎನ್ಸಿಆರ್ನ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಲೋನಿ ದೇಹತ್, ಹಿಂಡನ್ ಎಫ್ ಇಂದಿರಪುರಂ, ಚಪ್ರೌಲಾ ದಲ್ಲಿ ಭಾರೀ ಗುಡುಗು ಮಿಂಚಿನ ಮಳೆಯಾಗಲಿದ್ದು, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
This is Delhi airport terminal which now has been renamed as ferry terminal pic.twitter.com/8wAvA88Y83
— Dhananjay Singh (@KunwarDJAY) September 11, 2021
As heavy rains continued in Delhi Saturday morning, parts of Indira Gandhi International Airport was inundated with water. Videos circulating on Twitter showed a waterlogged airport.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm