ಬ್ರೇಕಿಂಗ್ ನ್ಯೂಸ್
14-09-21 04:13 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆ.14: ತಮಿಳುನಾಡು ಸರಕಾರ ನೀಟ್ ಪರೀಕ್ಷೆಯನ್ನು ರದ್ದುಪಡಿಸಿ, ನೂತನ ಕಾಯ್ದೆಯನ್ನೇ ಜಾರಿಗೆ ತಂದಿದೆ. ನೀಟ್ ಪರೀಕ್ಷೆ ಕುಳಿತುಕೊಳ್ಳಲು ಸಾಧ್ಯವಾಗಲ್ಲ ಎಂದು 19 ವರ್ಷದ ವಿದ್ಯಾರ್ಥಿಯೊಬ್ಬ ಸೇಲಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ನೇರವಾಗಿ ಮೆಡಿಕಲ್, ಇಂಜಿನಿಯರಿಂಗ್ ಸೀಟು ಗಿಟ್ಟಿಸುವಂತೆ ಹೊಸ ಮಸೂದೆ ಜಾರಿಗೆ ತಂದಿದ್ದಾರೆ.
ಸೋಮವಾರ ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರೋಧಿ ಮಸೂದೆ ಜಾರಿಗೊಳಿಸಿದ್ದು, ಅದರ ಬಳಿಕ ತಮ್ಮ ಸರಕಾರದ ನಡೆಯನ್ನು ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ. ನೀಟ್ ಕಾರಣಕ್ಕೆ ಬಹಳಷ್ಟು ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಅದರಿಂದ ವಿನಾಯ್ತಿ ಪಡೆಯುವ ನಿಟ್ಟಿನಲ್ಲಿ ನಾವು ಮಸೂದೆ ಪಾಸ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಈ ಮಸೂದೆ ಪ್ರಕಾರ, ಮೆಡಿಕಲ್, ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳು ತಮ್ಮ ಪ್ಲಸ್ ಟು ಅಥವಾ ಪಿಯುಸಿ ಅಂಕದ ಆಧಾರದಲ್ಲಿಯೇ ಈ ಹಿಂದಿನ ರೀತಿಯಲ್ಲೇ ಉನ್ನತ ಶಿಕ್ಷಣಕ್ಕೆ ಸೇರಲು ಅವಕಾಶ ಕೊಟ್ಟಿದೆ.

2013ರಿಂದ ಮೆಡಿಕಲ್ ಪದವಿಗೆ ಸೇರಲು ರಾಷ್ಟ್ರ ಮಟ್ಟದಲ್ಲಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಈ ಪ್ರಸ್ತಾವಕ್ಕೆ ಮೊದಲಿನಿಂದಲೂ ತಮಿಳುನಾಡು ಸರಕಾರ ವಿರೋಧಿಸುತ್ತ ಬಂದಿತ್ತು. ನೀಟ್ ಪರೀಕ್ಷೆ ಮೆಡಿಕಲ್ ಅಡ್ಮಿಶನ್ ಮಾಡಿಕೊಳ್ಳಲು ಸೂಕ್ತ ವ್ಯವಸ್ಥೆಯಲ್ಲ ಎಂದು ಹೇಳಿತ್ತು. ಈ ಬಾರಿ ಸೆ.12ರಂದು ಮಧ್ಯಾಹ್ನ 2ರಿಂದ 5ರ ವರೆಗೆ ದೇಶಾದ್ಯಂತ ನೀಟ್ ಪರೀಕ್ಷೆ ನಡೆಸಲಾಗಿತ್ತು. ಮರುದಿನವೇ ತಮಿಳುನಾಡು ಅಸೆಂಬ್ಲಿಯಲ್ಲಿ ನೀಟ್ ಪರೀಕ್ಷೆಯನ್ನು ತಮಿಳುನಾಡಿನಲ್ಲಿ ರದ್ದುಗೊಳಿಸಿ ಹೊಸ ಮಸೂದೆ ಜಾರಿಗೊಳಿಸಿದ್ದಾರೆ. ಈ ಬಾರಿಯೂ ನೀಟ್ ಪರೀಕ್ಷೆ ಬಯಸಿ ಅರ್ಜಿ ಸಲ್ಲಿಸಿದ್ದ ಏಳು ಶೇಕಡಾ ಮಂದಿಗೆ ದೇಶದಲ್ಲಿ ಅವಕಾಶ ಸಿಕ್ಕಿರಲಿಲ್ಲ.
ಸಾಮಾಜಿಕ ನ್ಯಾಯದ ಕಲ್ಪನೆಯಡಿ ತಾರತಮ್ಯ ರಹಿತ, ಎಲ್ಲರಿಗೂ ಸಮಾನ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಮತ್ತು ಉನ್ನತ ಶಿಕ್ಷಣದ ಅವಕಾಶ ಸಮಾಜದ ಎಲ್ಲ ವರ್ಗದವರಿಗೂ ಸಿಗುವಂತೆ ಮಾಡಲು ಈ ರೀತಿಯ ನೀಟ್ ಎಕ್ಸಾಂ ಜಾರಿಗೆ ತರಲಾಗಿದೆ ಎಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿ ಜಯಲಲಿತಾ ಸರಕಾರ ಇದ್ದಾಗಲೂ ಕೇಂದ್ರ ಸರಕಾರ ನೀಟ್ ಪರೀಕ್ಷೆ ಕಡ್ಡಾಯಗೊಳಿಸಿದ್ದನ್ನು ವಿರೋಧಿಸಲಾಗಿತ್ತು. ಇದೇ ಕಾರಣಕ್ಕೆ ಈ ಬಾರಿ ಡಿಎಂಕೆ ಸರಕಾರ ನೀಟ್ ವಿರೋಧಿ ಮಸೂದೆ ಜಾರಿಗೆ ತಂದಾಗ, ಎಐಎಡಿಎಂಕೆ ಶಾಸಕರು ಕೂಡ ಬೆಂಬಲ ನೀಡಿದ್ದಾರೆ.
The Tamil Nadu government will introduce a Bill in the Assembly on September 13 seeking President’s assent to exempt the state from the ambit of National Eligibility-cum-Entrance Test (NEET), a day after the death of a 19-year-old boy. Tamil Nadu Chief Minister MK Stalin, on September 12, assured to pass a Bill in the Assembly to "permanently exempt" the state's medical aspirants from taking NEET.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm