ಬ್ರೇಕಿಂಗ್ ನ್ಯೂಸ್
18-09-21 12:53 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆ 18 : ಭಾರತದಲ್ಲಿ ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.
ಈ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿರುವುದನ್ನು ಕೇಂದ್ರ ಆರೋಗ್ಯ ಖಾತೆ ಸಚಿವ ಮನ್‌ಸುಖ್ ಮಾಂಡವಿಯಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, "ಇಂದಿನ ದಾಖಲೆ ಸಂಖ್ಯೆಯ ಲಸಿಕೆ ನೀಡಿಕೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು" ಎಂದು ಹೇಳಿದ್ದರು. ಇದಕ್ಕೆ ಕಠಿಣ ಪರಿಶ್ರಮ ವಹಿಸಿದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಪ್ರಧಾನಿ ಮೋದಿ ಹುಟ್ಟುಹಬ್ಬದಂದು 2.5 ಕೋಟಿ ಲಸಿಕೆ ಡೋಸ್ ನೀಡಲು ಗುರಿ ನಿಗದಿಪಡಿಸಲಾಗಿತ್ತು. ಆದರೆ ಗುರಿ ಮೀರಿ 10390 ಹೆಚ್ಚುವರಿ ಡೋಸ್ ನೀಡಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ. ಚೀನಾದಲ್ಲಿ ಇದುವರೆಗಿನ ಗರಿಷ್ಠ ಅಂದರೆ ಜೂನ್‌ನಲ್ಲಿ ಒಂದೇ ದಿನ 2.47 ಕೋಟಿ ಮಂದಿಗೆ ಲಸಿಕೆ ನೀಡಲಾಗಿತ್ತು.
ಸಂಜೆಯ ವೇಳೆಗೆ ಭಾರತದ ಲಸಿಕೆ ನೀಡಿಕೆ ಸಂಖ್ಯೆ ಎರಡು ಕೋಟಿ ದಾಟಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಕಚೇರಿ ಟ್ವೀಟ್ ಮಾಡಿ ಭಾರತವನ್ನು ಅಭಿನಂದಿಸಿತ್ತು.

ಸರ್ಕಾರದ ಟ್ರ್ಯಾಕರ್ ಪ್ರಕಾರ ಪ್ರತಿ ಸೆಕೆಂಡಿಗೆ 800 ಲಸಿಕಾ ಡೋಸ್‌ಗಳನ್ನು ನೀಡಲಾಗಿದ್ದು, ನಿಮಿಷಕ್ಕೆ 48 ಸಾವಿರದಂರೆ ಲಸಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್.ಎಸ್.ಶರ್ಮಾ ಹೇಳಿದ್ದಾರೆ. ಒಂದು ತಿಂಗಳ ನಿರಂತರ ಪ್ರಯತ್ನದಿಂದ ಈ ಮೈಲುಗಲ್ಲು ಸಾಧಿಸಲಾಗಿದೆ ಎಂದು ಸರ್ಕಾರಿ ತಜ್ಞ ಡಾ.ಎನ್.ಕೆ.ಅರೋರಾ ಅಭಿಪ್ರಾಯಪಟ್ಟಿದ್ದಾರೆ.
Congratulations india!
— Mansukh Mandaviya (@mansukhmandviya) September 17, 2021
PM @NarendraModi जी के जन्मदिवस पर भारत ने आज इतिहास रच दिया है।
2.50 करोड़ से अधिक टीके लगा कर देश और विश्व के इतिहास में स्वर्णिम अध्याय लिखा है।
आज का दिन हेल्थकर्मियों के नाम रहा। #HealthArmyZindabad pic.twitter.com/F2EC5byMdt
India crossed 2.5 crore Covid vaccinations in a day for the first time on Friday as the government raced to deliver a record on Prime Minister Narendra Modi's birthday. At 11:58 pm, Union Health Minister Mansukh Mandaviya tweeted to confirm the "historic" figure..
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm