ಬ್ರೇಕಿಂಗ್ ನ್ಯೂಸ್
19-09-21 10:01 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆ.19 : ಖ್ಯಾತ ತಮಿಳು ಸಿನೆಮಾ ನಟ ಸೂಪರ್ ಸ್ಟಾರ್ ದಳಪತಿ ವಿಜಯ್ ತಮ್ಮ ತಂದೆ - ತಾಯಿ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಜಯ್ ಅವರ ಈ ನಡೆ ಅಚ್ಚರಿಗೆ ಕಾರಣವಾಗಿದೆ. ತಮ್ಮ ತಂದೆ-ತಾಯಿ ಸೇರಿ 11 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
ತಮ್ಮ ನೆಚ್ಚಿನ ನಟ ವಿಜಯ್ ನಡೆ ಅಭಿಮಾನಿಗಳ ಹುಬ್ಬೇರಿಸಿದೆ. ವಿಜಯ್ ತಂದೆ ಖ್ಯಾತ ನಿರ್ದೇಶಕ ಎಸ್. ಎ. ಚಂದ್ರಶೇಖರ್. ಹಲವಾರು ಸಿನಿಮಾಗಳನ್ನು ಅವರ ತಂದೆ ನಿರ್ದೇಶನ ಮಾಡಿದ್ದಾರೆ. ಜೊತೆ ಜೊತೆಗೆ ವಿಜಯ್ ಹೆಸರಿನಲ್ಲಿ 'ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್ ಎಂಬ ಹೆಸರಿನ ಕಲ್ಯಾಣ ಸಂಸ್ಥೆಯನ್ನು ತನ್ನ ಆರಂಭಿಸಿದ್ದರು. ಬಳಿಕ ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರಂತೆ.
ಆದರೆ ಇದು ದಳಪತಿ ನಟ ವಿಜಯ್ ಅವರಿಗೆ ಕಿಂಚಿತ್ತು ಇಷ್ಟವಿರಲಿಲ್ಲ. ಹೀಗಾಗಿ ಹಲವು ಸಮಸ್ಯೆಗಳು ಎದುರಾಗಿತ್ತು. ನನಗೂ ಆ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ನನ್ನ ಕುಟುಂಬ ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ನಟ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದಾರೆ. ತಾಯಿ ಶೋಭಾ ಹಾಗೂ ಸಹೋದರ ಸಂಬಂಧಿ ಪದ್ಮನಾಭನ್ ಕೂಡ ವಿಎಂಐ ಸಂಸ್ಥೆಯಲ್ಲಿ ಭಾಗಿಯಾಗಿದ್ದರು. ಇನ್ನು ವಿಜಯ್ ಕೂಡ ಇದೇ ಪಕ್ಷಕ್ಕೆ ಸೇರಿ ರಾಜಕೀಯಕ್ಕೆ ಕಾಲಿಡುತ್ತಾರೆ ಅನ್ನೋ ಸುದ್ದಿ ಹಬ್ಬಿತ್ತು. ಆದರೆ ನನಗೂ ಈ ಪಕ್ಷಕ್ಕೂ ಸಂಬಂಧವಿಲ್ಲ ಅಂತ ನಟ ವಿಜಯ್ ಸ್ಪಷ್ಟಪಡಿಸಿದ್ದರು. ತಂದೆ-ತಾಯಿ ಈ ಸಂಸ್ಥೆಯ ಹೆಸರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿ ಕೊಳ್ಳುತ್ತಿದ್ದರು. ಹೀಗಾಗಿ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್ ಕ್ಲಬ್ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ವಿಜಯ್ ಹಾಗೂ ತಂದೆ ಚಂದ್ರಶೇಖರ್ ನಡುವೆ ಕೆಲದಿನಗಳಿಂದ ಶೀತಲ ಸಮರ ನಡೆಯುತ್ತಿತ್ತು. ಇದೀಗ ಸ್ವತಹ ವಿಜಯ್ ಕೋರ್ಟ್ ಗೆ ಹೋಗಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ’ ಎಂದು ವಿಜಯ್ ಹೇಳಿದ್ದರು. ಪಕ್ಷಕ್ಕೆ ವಿಜಯ್ ಹೆಸರಿದೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಆಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ವಿಜಯ್ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.
ಸದ್ಯ ವಿಜಯ್ ಬೀಸ್ಟ್ ಎಂಬ ಹೆಸರಿನ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ಈ ಸಿನಿಮಾದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿತ್ತು. ಪೂಜಾ ಹೆಗ್ಡೆ ವಿಜಯ್ ಜೊತೆ ಮೊದಲಬಾರಿಗೆ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Actor Vijay has filed a civil suit in a city court seeking to restrain 11 persons, including his parents, from conducting any meeting and activities using his name. In the civil suit, he also sought a declaration that the deed of association is null and void and sought a stay on the conducting of any meeting and activities with the use of his name. He also sought an interim stay against 11 respondents including his parents. The office-bearers of his fan club were also cited as respondents, said sources.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am