ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm