ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್‌ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್‌ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್‌ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm