ಬ್ರೇಕಿಂಗ್ ನ್ಯೂಸ್
11-09-20 11:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿರುವ ಹೊತ್ತಲ್ಲೇ ದಿಢೀರ್ ಆಗಿ ಎಐಸಿಸಿ ಉಸ್ತುವಾರಿಗಳ ಪುನಾರಚನೆ ಮಾಡಲಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸ್ಥಾನದಿಂದ ಹಿರಿಯ ಮುಖಂಡ ವೀರಪ್ಪ ಮೊಯ್ಲಿಯನ್ನು ಕಿತ್ತು ಹಾಕಲಾಗಿದೆ. ಮೊಯ್ಲಿ ಜಾಗಕ್ಕೆ ಕರ್ನಾಟಕದವರೇ ಆದ ಮಾಜಿ ಸಚಿವ ಕೃಷ್ಣಭೈರೇ ಗೌಡರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಕರ್ನಾಟಕದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ್ ಅವರಿಗೆ ಇತರೇ ರಾಜ್ಯಗಳ ಉಸ್ತುವಾರಿ ಹೊಣೆ ನೀಡಲಾಗಿದೆ. ದಿನೇಶ್ ಗುಂಡೂರಾವ್ ಗೆ ತಮಿಳುನಾಡು ಜೊತೆಗೆ ಪಾಂಡಿಚೇರಿ, ಗೋವಾ ರಾಜ್ಯಗಳ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಉತ್ತರ ಕರ್ನಾಟಕದ ಹಿರಿಯ ಮುಖಂಡ ಎಚ್.ಕೆ ಪಾಟೀಲ್ ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ನೀಡಲಾಗಿದೆ.

ಹಾಗೆಯೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿದ್ದ ಕೆ.ಸಿ. ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ತರಲಾಗಿದೆ. ಅಲ್ಲದೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಆಜಾದ್ ಅವರನ್ನೂ ತೆಗೆದು ಹಾಕಲಾಗಿದೆ. ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಎ.ವಿ. ಶ್ರೀನಿವಾಸ್ ಅವರನ್ನು ಎಐಸಿಸಿ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ವೀರಪ್ಪ ಮೊಯ್ಲಿ , ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್, ಶಶಿ ತರೂರ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯದ ಬಗ್ಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪತ್ರ ಮಾಧ್ಯಮಕ್ಕೆ ಬಹಿರಂಗ ಆಗಿದ್ದು ಗಾಂಧಿ ಕುಟುಂಬ ಮತ್ತು ಎಐಸಿಸಿ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿತ್ತು. ಆನಂತರ ಗುಲಾಂ ನಬಿ ಆಜಾದ್ ಮತ್ತು ವೀರಪ್ಪ ಮೊಯ್ಲಿ ತಾವು ಪತ್ರಕ್ಕೆ ಸಹಿ ಹಾಕಿದ್ದನ್ನು ಒಪ್ಪಿಕೊಂಡಿದ್ದರಲ್ಲದೆ, ಪಕ್ಷದ ಒಳಿತಿಗಾಗಿ ಪತ್ರ ಬರೆದಿದ್ದು ಸತ್ಯ ಎಂದಿದ್ದರು. ಇದೀಗ ವೀರಪ್ಪ ಮೊಯ್ಲಿಯನ್ನು ಕೇಂದ್ರ ಚುನಾವಣಾ ಸಮಿತಿಯಿಂದ ಹೊರಗಿಡಲಾಗಿದೆ. ಗುಲಾಂ ನಬಿ ಆಜಾದನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಲಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm