ಬ್ರೇಕಿಂಗ್ ನ್ಯೂಸ್
01-11-21 07:34 pm Headline Karnataka News Desk ದೇಶ - ವಿದೇಶ
ಲಕ್ನೋ, ನ.1: ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಸದ್ಯ ಆಜಂಪುರ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಅಖಿಲೇಶ್ ಯಾದವ್, ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯೂ ಆಗಿದ್ದರು. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿಯಿಂದ ಅಖಿಲೇಶ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದರೂ, ಅವರು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿಎಂ ಅಭ್ಯರ್ಥಿಯಾಗಿ ಬೇರೆ ಯಾರನ್ನಾದರೂ ಬಿಂಬಿಸುತ್ತಾರೆಯೇ ಎಂಬ ಬಗ್ಗೆ ಕುತೂಹಲ ಎದ್ದಿದೆ.
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಚುನಾವಣಾ ಪ್ರಚಾರದಲ್ಲಿರುವ ಅಖಿಲೇಶ್ ಯಾದವ್ ಚುನಾವಣೆಗೆ ಮೊದಲೇ ಸ್ಥಳೀಯ ಪಕ್ಷಗಳ ಜೊತೆ ಮೈತ್ರಿ ಸಾಧಿಸುವ ಯತ್ನದಲ್ಲಿದ್ದಾರೆ. ಆರ್ ಎಲ್ ಡಿ ಜೊತೆಗೆ ಈಗಾಗಲೇ ಮಾತುಕತೆ ನಡೆದಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಇದಲ್ಲದೆ, ಸಚ್ ದೇವ್ ಭಾರತೀಯ ಸಮಾಜಪಾರ್ಟಿ ಮತ್ತು ಶಿವಪಾಲ್ ಸಿಂಗ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಾರ್ಟಿ ಲೋಹಿಯಾ ಜೊತೆಗೂ ಮೈತ್ರಿಗೆ ಸಿದ್ಧತೆ ನಡೆದಿದೆ.
ವಾರದ ಹಿಂದಷ್ಟೇ ಬಿಜೆಪಿಯ ಒಬ್ಬ ಶಾಸಕ ಮತ್ತು ಆರು ಮಂದಿ ಬಿಎಸ್ಪಿ ಶಾಸಕರು ಸಮಾಜವಾದಿ ಪಾರ್ಟಿಗೆ ಸೇರ್ಪೆಡೆಯಾಗಿದ್ದರು. ಈ ವೇಳೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್, ಭಾಜಪಾ ಪರಿವಾರ್ ಮುಂದಿನ ದಿನಗಳಲ್ಲಿ ಭಾಗ್ ತಾ ಪರಿವಾರ್ (ಕುಟುಂಬ ಬಿಟ್ಟು ಓಡುವ) ಆಗಲಿದೆ ಎಂದು ಟೀಕಿಸಿದ್ದರು.
2022ರಲ್ಲಿ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದ್ದು ಬಿಜೆಪಿಯಿಂದ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನಗಳ ಹಿಂದೆ ಲಕ್ನೋಗೆ ಬಂದಿದ್ದ ಅಮಿತ್ ಷಾ, ಮುಂದಿನ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದು ಹೇಳಿದ್ದರು.
Samajwadi Party chief Akhilesh Yadav has said he will not contest the Uttar Pradesh election next year, but his party insists a decision will be taken collectively and there is none yet. Akhilesh Yadav was quoted by Press Trust of India as saying: "I will not be contesting the assembly election myself".
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm