ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm