ಬ್ರೇಕಿಂಗ್ ನ್ಯೂಸ್
11-11-21 06:34 pm HK News Desk ದೇಶ - ವಿದೇಶ
ಮುಂಬೈ: ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ವ್ಯಕ್ತಿಯೋರ್ವ ನ್ಯಾಯಾಲಯದ ಒಳಗೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿದ್ದಾನೆ. ಈ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಕೋರ್ಟ್‌ನಲ್ಲಿ ನಡೆದಿದೆ.
ರೋಷನ್ ಘೋರ್ಪಡೆ ಎಂಬಾತ ಇಂಥ ಕೃತ್ಯ ಎಸಗಿದವನು. ಈತ ತನ್ನ ಪತ್ನಿ ಹಾಗೂ ತಾಯಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಈತನ ವಿಚಾರಣೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಆದರೆ ವಿಚಾರಣೆ ದಿನಗಳಲ್ಲಿ ಪೊಲೀಸರಿಗೆ ಎಷ್ಟೇ ಬೇಡಿಕೊಂಡರೂ ಅವರು ಈತನನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುತ್ತಿರಲಿಲ್ಲ. ಪ್ರತಿಬಾರಿಯೂ ತನ್ನನ್ನು ಕೋರ್ಟ್‌ಗೆ ಕರೆದುಕೊಂಡು ಹೋಗಿ ಎನ್ನುತ್ತಿದ್ದ. ಆದರೆ ಪೊಲೀಸರು ಕೋರ್ಟ್ ಆದೇಶವಿದ್ದರಷ್ಟೇ ಕರೆದುಕೊಂಡು ಹೋಗುವುದಾಗಿ ಹೇಳಿದ್ದರು.
ಇದರಿಂದ ರೋಷನ್ ನ್ಯಾಯಾಧೀಶರ ವಿರುದ್ಧ ಸಿಟ್ಟಿಗೆದ್ದಿದ್ದ. ನಿನ್ನೆ ವಿಚಾರಣೆಗೆ ಕರೆದುಕೊಂಡು ಹೋದಾಗ ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿದ್ದಾನೆ. ತಕ್ಷಣ ನ್ಯಾಯಾಧೀಶರು ಕೆಳಗೆ ಬಗ್ಗಿ ತಪ್ಪಿಸಿಕೊಂಡಿದ್ದಾರೆ.
ಈಗ ಕೊಲೆ ಕೇಸಿನ ಜತೆಗೆ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ಅಡ್ಡಿಪಡಿಸಲು ಯತ್ನ), 504ರ (ಶಾಂತಿಯನ್ನು ಭಂಗಗೊಳಿಸಿ ಉದ್ದೇಶಪೂರ್ವಕ ಅವಮಾನ)ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A man accused in a murder case hurled a slipper at a judge in a local court in Maharashtra's Thane district as he was angry that he was not being brought to the court on the dates of his hearing, police said today. The incident took place at the court in Kalyan, where undertrial Roshan Ghorpade was being tried for the murder of his wife and mother, a police officer said. During the hearing, Ghorpade picked up a slipper and hurled it at the judge. However, the footwear did not hit the judge as he ducked, the official said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am