ಬ್ರೇಕಿಂಗ್ ನ್ಯೂಸ್
29-11-21 02:12 pm HK Desk news ದೇಶ - ವಿದೇಶ
ನವದೆಹಲಿ, ನ.29: ವಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳ ಸಂಸದರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ವಿವಾದಿತ ಕೃಷಿ ಮಸೂದೆಗಳನ್ನು ಬಿಜೆಪಿ ಸರಕಾರ ಅಧಿಕೃತವಾಗಿ ಹಿಂಪಡೆದುಕೊಂಡಿದೆ. ಕಾಂಗ್ರೆಸ್ ನಾಯಕರು ಕೃಷಿ ಮಸೂದೆ ಹಿಂತೆಗೆತದ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.


ಆದರೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮಸೂದೆಗಳನ್ನು ಹಿಂಪಡೆಯುವ ಬಗ್ಗೆ ಸದನಕ್ಕೆ ಓದಿ ಹೇಳಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರು ಸದನದ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಕೇಳಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ, ಧಿಕ್ಕಾರ, ಬೊಬ್ಬೆ ಹಾಕುತ್ತಲೇ ಸ್ಪೀಕರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದರ ನಡುವೆಯೇ, ಬಿಜೆಪಿ ಸಂಸದರು ಧ್ವನಿಮತದ ಮೂಲಕ ಮಸೂದೆಯನ್ನು ಹಿಂಪಡೆಯುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಸದನದ ಒಪ್ಪಿಗೆ ಪಡೆದಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು, ಕಾಂಗ್ರೆಸ್ ನಾಯಕರು ಶಾಂತಿಯಿಂದ ವರ್ತಿಸಿದರೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಗಳ ವಿರುದ್ಧ ಒಂದು ವರ್ಷದ ಪರ್ಯಂತ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು.
ನವೆಂಬರ್ ಆರಂಭದಲ್ಲಿ ಪ್ರಧಾನಿ ಮೋದಿ ದಿಢೀರ್ ಆಗಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದರು. ಇದೇ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಮಸೂದೆ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಮಸೂದೆಗಳನ್ನು ಹಿಂಪಡೆದಿದ್ದು, ವಿಪಕ್ಷಗಳು ಮತ್ತು ಕೃಷಿಕರ ಪರ ಸಂಘಟನೆಗಳ ವಿರೋಧಕ್ಕೆ ಮಣೆ ಹಾಕಲಾಗಿದೆ.
The 25-day Winter Session of parliament, during which over 30 bills are expected to be passed, began today. A crucial bill to cancel farm laws was passed in Lok Sabha in the fastest repeal in recent years amid protests by the opposition.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm