ಬ್ರೇಕಿಂಗ್ ನ್ಯೂಸ್
30-11-21 02:58 pm HK Desk news ದೇಶ - ವಿದೇಶ
ನವದೆಹಲಿ, ನ.30: ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಭಾರತದಲ್ಲಿ ಇನ್ನೂ ಪತ್ತೆಯಾಗಿಲ್ಲ. ಅದು ಬರದಂತೆ ತಡೆಯಲು ಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಂಸತ್ತಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಗತ್ತಿನ 14 ದೇಶಗಳಲ್ಲಿ ಈಗಾಗಲೇ ಈ ಹೊಸ ವೈರಸ್ ಕಂಡುಬಂದಿದೆ. ಭಾರತದಲ್ಲಿ ಇನ್ನೂ ಪತ್ತೆಯಾಗಿಲ್ಲ. ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಲ್ಲದೆ, ಇದರ ಪತ್ತೆಗಾಗಿ ಜೀನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನೂ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕೋವಿಡ್ 19 ಬಗ್ಗೆ ಹೇಳಿಕೆ ನೀಡಿರುವ ಮಾಂಡವೀಯ, ಕೋವಿಡ್ ಸ್ಥಿತಿ ಈಗ ಸಂಪೂರ್ಣ ಹತೋಟಿಗೆ ಬಂದಿದೆ. ಆದರೆ, ಕೊರೊನಾ ಪೂರ್ತಿಯಾಗಿ ನಮ್ಮನ್ನು ಬಿಟ್ಟು ಹೋಗಿಲ್ಲ. ದೇಶಾದ್ಯಂತ ಈವರೆಗೆ 124 ಕೋಟಿ ಜನರಿಗೆ ಲಸಿಕೆಯನ್ನ ನೀಡಲಾಗಿದೆ ಎಂದು ಹೇಳಿದರು.

ಈಗಾಗ್ಲೇ ಓಮಿಕ್ರಾನ್ ಪತ್ತೆಯಾಗಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಭಾರತ ಸರಕಾರ ಬಿಡುಗಡೆ ಮಾಡಿದೆ. ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಸೇರಿದಂತೆ ತಮ್ಮ ಪ್ರಯಾಣದ 14 ದಿನಗಳ ಹಿಸ್ಟರಿಯನ್ನು ನಮೂದಿಸಿದ ಬಳಿಕವೇ ಭಾರತಕ್ಕೆ ಬರಬೇಕಾಗುತ್ತದೆ. ಅದಲ್ಲದೆ, ಕೇಂದ್ರ ಆರೋಗ್ಯ ಸಚಿವಾಲಯದಿಂದ ಟೆಸ್ಟಿಂಗ್ ಹೆಚ್ಚಿಸಲು ಮತ್ತು ಜಿನೋಮ್ ಸೀಕ್ವೆನ್ಸ್ ಪರೀಕ್ಷೆ ಕೈಗೊಳ್ಳಲು ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಲಾಗಿದೆ. ವಿಮಾನ ಯಾನ ಸಚಿವಾಯಲಯದಿಂದಲೂ ಈ ಬಗ್ಗೆ ನಿಗಾ ಇಡಲಾಗಿದೆ ಎಂದು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದ ವೈದ್ಯರು ಹೊಸ ವೈರಸ್ ಬಗ್ಗೆ ಗಾಬರಿ ಪಡಬೇಕಾಗಿಲ್ಲ ಎಂದಿದ್ದರೂ, ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಗ್ಲೋಬಲ್ ರಿಸ್ಕ್ (ಅಪಾಯಕಾರಿ) ಎನ್ನುವ ಮೂಲಕ ಜಗತ್ತಿನ ದೇಶಗಳನ್ನು ಆತಂಕಕ್ಕೆ ತಳ್ಳಿದ್ದಾರೆ. ಹೀಗಾಗಿ ತಮ್ಮಲ್ಲಿಗೆ ಈ ವೈರಸ್ ಬರದಂತೆ ತಡೆಯಲು ಎಲ್ಲ ದೇಶಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ.
Speaking in the Rajya Sabha during Question Hour on Tuesday, Union Minister of Health and Family Welfare Mansukh Mandaviya said that no case of new coronavirus variant Omicron has been detected in India so far. Last week, the World Health Organisation had classified the variant (B.1.1.529) as a 'variant of concern'. On Monday, the WHO said the variant poses "very high" global risk.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am