ಬ್ರೇಕಿಂಗ್ ನ್ಯೂಸ್
08-01-22 01:14 pm HK Desk news ದೇಶ - ವಿದೇಶ
ನವದೆಹಲಿ, ಜ 8: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.
The Election Commission of India will announce the schedule of the elections for the states of Uttar Pradesh, Goa, Punjab, Manipur and Uttarakhand today.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 07:23 pm
Mangalore Correspondent
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm