ಬ್ರೇಕಿಂಗ್ ನ್ಯೂಸ್
16-09-20 05:40 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 16: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರಿಸಿರುವ ನಟಿ ಕಂಗನಾ ರನೌತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಗ ಸಚಿವ ಆದಿತ್ಯ ಠಾಕ್ರೆ ಡ್ರಗ್ಸ್ ಜಾಲದಲ್ಲಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಬಾಲಿವುಡ್ ಡ್ರಗ್ಸ್ ನಂಟಿನ ಬಗ್ಗೆ ಎನ್ ಸಿಬಿ ತನಿಖೆ ನಡೆಯುತ್ತಿರುವಾಗಲೇ ಉದ್ಧವ್ ಠಾಕ್ರೆ ಬಗ್ಗೆ ಆರೋಪ ಕೇಳಿಬಂದಿದೆ.
ಮೂವಿ ಮಾಫಿಯಾ, ಸುಶಾಂತ್ ಸಿಂಗ್ ರಜಪೂತ್ ಕೊಲೆ ಮತ್ತು ಡ್ರಗ್ಸ್ ದಂಧೆಯ ಕುರಿತು ಬಯಲಿಗೆಳೆಯಲು ಮುಂದಾಗಿದ್ದಕ್ಕೆ ಮುಖ್ಯಮಂತ್ರಿಗೆ ಸಹಿಸಲಾಗಲಿಲ್ಲ. ಅವರ ಪ್ರೀತಿಯ ಮಗ ಆದಿತ್ಯ ಠಾಕ್ರೆ ಈ ಜಾಲದಲ್ಲಿ ನಂಟು ಹೊಂದಿದ್ದಾರೆ. ಹಾಗಾಗಿ ನನ್ನ ಮಾತುಗಳು ಅವರಿಗೆ ಅಪರಾಧ ಎನಿಸಿದ್ದವು. ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನ ಮಾಡಿದ್ದರು. ಈಗ ಯಾರು ಇಕ್ಕಟ್ಟಿಗೆ ಸಿಲುಕುತ್ತಾರೆ ನೋಡೋಣ’ ಎಂದು ಕಂಗನಾ ಮತ್ತೆ ಸವಾಲು ಹಾಕಿದ್ದಾರೆ.
ಒಂದು ವೇಳೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಇರುತ್ತಿದ್ದರೆ, ಭ್ರಷ್ಟ ಸೋನಿಯಾ ಸೇನೆ ಆಡಳಿತದಲ್ಲಿ ಇಲ್ಲದಿದ್ದರೆ, ಮುಂಬೈ ಪೊಲೀಸರು ಸರಿಯಾಗೇ ಇರುತ್ತಿದ್ದರು ಎಂದು ಹೇಳಿದ್ದಾರೆ.
ಕಂಗನಾ ಬಗ್ಗೆ ಟೀಕಿಸಿರುವ ಕಾಂಗ್ರೆಸ್, ಮಹಾರಾಷ್ಟ್ರವನ್ನು ಅವಮಾನಿಸುವ ಜೊತೆಗೆ ಮುಂಬೈ ಪೊಲೀಸರ ಸಾಮರ್ಥ್ಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕಂಗನಾ ಫ್ಲಾಪ್ ಶೋ ಇಲ್ಲಿಗೆ ಮುಗಿದಿದೆ. ಡ್ರಗ್ಸ್ ಮಾಫಿಯಾ ಕುರಿತು ಎಲ್ಲ ಮಾಹಿತಿ ಇದೆ ಎಂದಿದ್ದರು. ಆದರೆ, ಯಾವುದನ್ನು ಬಹಿರಂಗಪಡಿಸಿಲ್ಲ. ಕಂಗನಾ ಅವರ ಆರೋಪಗಳ ಪ್ರಯೋಜನವನ್ನು ಬಿಜೆಪಿ ಪಡೆಯಲು ಯತ್ನಿಸಿದರೂ ಅದರಿಂದ ಉಪಯೋಗ ಆಗಲಿಲ್ಲ ಎಂದು ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ವಕ್ತಾರ ಆರ್.ಕೆ. ತ್ರಿವೇದಿ ಟೀಕಿಸಿದ್ದಾರೆ.
Basic problem of Maharashtra CM is why I exposed movie mafia, murderers of SSR and its drug racket, who his beloved son Aaditya Thakeray hangs out with, this is my big crime so now they want to fix me, ok try let’s see who fixes who!!! https://t.co/KzfVPfx5s8
— Kangana Ranaut (@KanganaTeam) September 14, 2020
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm