ಬ್ರೇಕಿಂಗ್ ನ್ಯೂಸ್
31-01-22 11:43 am HK Desk news ದೇಶ - ವಿದೇಶ
ಹೈದರಾಬಾದ್, ಜ 31 : 9ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಭೀಕರ ಘಟನೆ ತೆಲಂಗಾಣದ ಕರೀಮ್ನಗರ ಜಿಲ್ಲೆಯಲ್ಲಿ ನಡೆದಿದೆ.
ಫುಟ್‌ಪಾಥ್‌ಗೆ ಕಾರು ನುಗ್ಗಿಸಿರುವ ಬಾಲಕ, ಅಲ್ಲಿ ಕುಳಿತಿದ್ದ ಓರ್ವ ಬಾಲಕಿ ಹಾಗೂ ಮೂವರು ಮಹಿಳೆಯರ ಪ್ರಾಣ ಕಿತ್ತುಕೊಂಡಿದ್ದಾನೆ!
ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿದ ಬಾಲಕ, ವಾಹನವನ್ನು ಫೂಟ್ಪಾತ್ ಮೇಲೆ ಹರಿಸಿದ್ದಾನೆ. ಅಲ್ಲಿದ್ದ ನಾಲ್ವರ ಪ್ರಾಣ ಹೋಗಿದೆ. ಇವರಲ್ಲಿ ಓರ್ವ 14 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದ ಬಾಲಕ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್ನಿಂದ ಕೈ ತೆಗೆದಿದ್ದಾನೆ. ಆ ವೇಳೆ ಆರು ನಿಯಂತ್ರಣ ತಪ್ಪಿದೆ. ಗಲಿಬಿಲಿಗೊಂಡ ಬಾಲಕ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಪ್ರೆಸ್ ಮಾಡಿದ್ದಾನೆ. ಆಗ ಕಾರು ನೇರವಾಗಿ ಫುಟ್‌ಪಾಥ್ ಮೇಲೆ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದ್ದು ಅವರೆಲ್ಲಾ ಮೃತಪಟ್ಟಿದ್ದಾರೆ.
9ನೇ ತರಗತಿಯವರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಅಲ್ಲೇ ಬಿಟ್ಟು, ಎಲ್ಲರೂ ಓಡಿಹೋಗಿದ್ದರು. ನಂತರ ಅವರನ್ನು ಬಂಧಿಸಲಾಗಿದೆ. ಮೂವರು ಅಪ್ರಾಪ್ತರ ವಿರುದ್ಧ ಐಪಿಎಸ್ ಸೆಕ್ಷನ್ 304ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ ಎಂದು ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.
Four women have died after a speeding car driven by a minor ran over the people sitting on the footpath in Karimnagar district of Telangana, says local police. "A case has been registered under section 304 of Indian Penal Code (IPC) on the minors travelling in the car," said V Satyanarayana, Commissioner of Police, Karimnagar.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm