ಬ್ರೇಕಿಂಗ್ ನ್ಯೂಸ್
01-02-22 10:43 am HK Desk news ದೇಶ - ವಿದೇಶ
ಕಾನ್ಪುರ, ಫೆ 01: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್‌ರೋಡ್‌ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Kanpur, At least six people were killed and 12 others were injured after an electric bus lost control and ran over bystanders in Kanpur today, police said. The incident occurred near the Tat Mill crossroad.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm