ಬ್ರೇಕಿಂಗ್ ನ್ಯೂಸ್
10-03-22 10:59 am HK Desk news ದೇಶ - ವಿದೇಶ
ನವದೆಹಲಿ, ಮಾ.10 : ಬಹು ನಿರೀಕ್ಷಿತ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ನಿರೀಕ್ಷೆಯಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ನಿಚ್ಚಳವಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಉತ್ತರ ಪ್ರದೇಶದ ಮತದಾರ ಸಂಪೂರ್ಣ ಬೆಂಬಲ ನೀಡಿದ್ದಾನೆ. ಬೆಳಗ್ಗೆ 10.30 ಗಂಟೆಯ ವರೆಗಿನ ಫಲಿತಾಂಶದಲ್ಲಿ ಬಿಜೆಪಿ 263 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಸಮಾಜವಾದಿ ಪಾರ್ಟಿ 111 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಅತಂತ್ರ ಫಲಿತಾಂಶ ನಿರೀಕ್ಷಿಸಿದ್ದ ಗೋವಾದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರ ಸ್ಥಾಪಿಸುವ ಸಾಧ್ಯತೆ ಕಂಡುಬಂದಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 13 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಇದೇ ವೇಳೆ, ಟಿಎಂಸಿ ಮತ್ತು ಇತರರು ಎಂಟು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 17 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. 60 ಸದಸ್ಯಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸ್ಥಾನಗಳು ಬೇಕಾಗಿದ್ದು, ಬಹುತೇಕ ಅತಂತ್ರ ಫಲಿತಾಂಶ ಎದುರಾಗುವ ಸಾಧ್ಯತೆ ಕಂಡುಬಂದಿದೆ. ಉತ್ತರಾಖಂಡದಲ್ಲಿ ಮತ್ತೆ ಬಿಜೆಪಿ ಅಧಿಕಾರ ಸ್ಥಾಪಿಸುವತ್ತ ಮುನ್ನುಗ್ಗಿದೆ. ಬಿಜೆಪಿ 43 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು, ಕಾಂಗ್ರೆಸ್ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸಿಗೆ ತೀವ್ರ ಮುಖಭಂಗ ಆಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಆಪ್ ಪಕ್ಷ ಮುನ್ನಡೆ ತೋರಿದೆ. ಆಪ್ ಪಕ್ಷ 88 ಸ್ಥಾನಗಳಲ್ಲಿ ಮುನ್ನಡೆ, ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆ, ಅಕಾಲಿದಳ 8 ಸ್ಥಾನಗಳಲ್ಲಿ ಮುನ್ನಡೆ ಇರುವುದು ಕಂಡುಬಂದಿದೆ. ಪಂಜಾಬ್ ನಲ್ಲಿ ಸಮೀಕ್ಷೆ ಭವಿಷ್ಯದಂತೆ ಬಹುತೇಕ ಕ್ಲೀನ್ ಸ್ವೀಪ್ ಸಾಧಿಸುವ ಸಾಧ್ಯತೆ ಕಂಡುಬಂದಿದೆ. ಸಿಖ್ಖರ ನಾಡಿನಲ್ಲಿ ಕಳೆದ ಚುನಾವಣೆಯಲ್ಲಿ ಆಪ್ 20 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ ಇಡೀ ರಾಜ್ಯವನ್ನು ಆವರಿಸಿಕೊಂಡಿದ್ದು, ಕಾಂಗ್ರೆಸಿನ ಒಳಜಗಳದ ಲಾಭವನ್ನು ಪಡೆದುಕೊಂಡಿದೆ.
ಒಟ್ಟಿನಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಬಿಜೆಪಿ ಮತ್ತೆ ಬಹುಮತ ಗಳಿಸುವತ್ತ ಮುನ್ನುಗ್ಗಿದೆ. ಪಂಜಾಬ್ ನಲ್ಲಿ ಆಪ್ ಗೆ ಅಧಿಕಾರ ಕೊಟ್ಟರೆ, ಗೋವಾದಲ್ಲಿ ಬಿಜೆಪಿ ಮತ್ತೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
Early numbers show that the Bharatiya Janata Party (BJP) has crossed the halfway mark. The saffron party, led by Chief Minister Yogi Adityanath, is looking to retain its power in Uttar Pradesh.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 07:43 pm
Bangalore Correspondent
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am