ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm