ಬ್ರೇಕಿಂಗ್ ನ್ಯೂಸ್
25-03-22 10:42 pm HK Desk news ದೇಶ - ವಿದೇಶ
ಲಕ್ನೋ, ಮಾ.25 : ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಸಿಎಂ ಆಗಿ ದಾಖಲೆ ಬರೆದಿದ್ದಾರೆ.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ ಒಂದು ಲಕ್ಷಕ್ಕೂ ಹೆಚ್ಚು ಜನರ ಮಧ್ಯೆ ಯೋಗಿ ತನ್ನ ಗಜಗಾತ್ರದ ಸಂಪುಟದೊಂದಿಗೆ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತರಿದ್ದರು.

ಯೋಗಿ ಸಂಪುಟದಲ್ಲಿ ಇಬ್ಬರು ಡಿಸಿಎಂ ಮತ್ತು 16 ಮಂದಿ ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿ ಒಟ್ಟು 52 ಮಂದಿ ಸಚಿವರಾಗಿ ಸೇರ್ಪಡೆ ಆಗಿದ್ದಾರೆ. ಕಳೆದ ಬಾರಿ ಡಿಸಿಎಂ ಆಗಿದ್ದ ಕೇಶವಪ್ರಸಾದ್ ಮೌರ್ಯ ಮತ್ತು ಹಿರಿಯ ನಾಯಕ ಬೃಜೇಶ್ ಪಾಠಕ್ ಡಿಸಿಎಂ ಆಗಿ ಪ್ರಮಾಣ ವಚನ ಪಡೆದಿದ್ದಾರೆ. ಮೋದಿ ಆಪ್ತರೆಂದು ಸ್ಥಾನ ಪಡೆದಿರುವ ಮಾಜಿ ಐಎಎಸ್ ಅಧಿಕಾರಿ ಅರವಿಂದ ಕುಮಾರ್ ಶರ್ಮಾ ಮತ್ತು ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ದಾನಿಷ್ ಆಜಾದ್ ಯೋಗಿ ಸರಕಾರದಲ್ಲಿ ಸಚಿವ ಸ್ಥಾನ ಪಡೆದ ಏಕೈಕ ಮುಸ್ಲಿಂ ವ್ಯಕ್ತಿ.
ಕಳೆದ ಬಾರಿ ಸಚಿವರಾಗಿದ್ದ 22 ಮಂದಿಗೆ ಈ ಬಾರಿಯೂ ಸಚಿವ ಸ್ಥಾನ ನೀಡಲಾಗಿದೆ. ಉಳಿದವರನ್ನು ಕೈಬಿಡಲಾಗಿದ್ದು ಹೊಸಬರಿಗೆ ಸ್ಥಾನ ನೀಡಲಾಗಿದೆ. ಅಖಿಲೇಶ್ ಯಾದವ್ ಮತ್ತು ಮಾಯಾವತಿಗೆ ಆಹ್ವಾನ ಇತ್ತಾದರೂ, ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ.
Yogi Adityanath will take oath as the Chief Minister of Uttar Pradesh on Friday (March 25, 2022). The BJP leaders is all set to script history and take oath as the CM of Uttar Pradesh for a new term in office after completing a full five-year term, a feat none of his predecessors has been able to achieve.Prime Minister Narendra Modi, Union Home Minister Amit Shah, chief ministers of BJP-ruled states and senior BJP leaders are expected to attend the oath-taking ceremony.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm