ಬ್ರೇಕಿಂಗ್ ನ್ಯೂಸ್
11-04-22 06:00 pm HK Desk news ದೇಶ - ವಿದೇಶ
ಇಸ್ಲಮಾಬಾದ್, ಎ.11: ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಶೆಹಬಾದ್ ಷರೀಫ್ ಆಯ್ಕೆಯಾಗಿದ್ದಾರೆ. ಇಮ್ರಾನ್ ಖಾನ್ ಅವಿಶ್ವಾಸ ಮತದ ಸೋಲಿನಿಂದ ಹುದ್ದೆ ತ್ಯಜಿಸಿದ ಬಳಿಕ ಸೋಮವಾರ ಸಂಜೆ ವಿಪಕ್ಷ ಪಾಕಿಸ್ಥಾನ ಮುಸ್ಲಿಂ ಲೀಗ್- (ನವಾಜ್) ಪಕ್ಷದ ಪ್ರಧಾನಿ ಅಭ್ಯರ್ಥಿ ಶೆಹಬಾದ್ ಪರವಾಗಿ ಮತ ಚಲಾವಣೆ ನಡೆದು ಅವಿರೋಧ ಆಯ್ಕೆಯಾಗಿದ್ದಾರೆ. ಇಮ್ರಾನ್ ಖಾನ್ ಅವರ ಪಾಕಿಸ್ಥಾನ್ ತೆಹ್ರೀಕ್ ಪಕ್ಷದ ಸದಸ್ಯರು ಸಭಾತ್ಯಾಗ ನಡೆಸಿದ್ದಾರೆ.
ಇದಕ್ಕೂ ಮುನ್ನ ಶೆಹಬಾದ್ ಷರೀಫ್ ನೂತನ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆ ಇಮ್ರಾನ್ ಖಾನ್ ಸಂಪುಟದಲ್ಲಿದ್ದ ಸದಸ್ಯರು ತಮ್ಮ ನ್ಯಾಶನಲ್ ಅಸೆಂಬ್ಲಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ತೆಹ್ರೀಕ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಸೂಚಿಸಲ್ಪಟ್ಟಿದ್ದ ಇಮ್ರಾನ್ ಸಂಪುಟದ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ, ಡೆಪ್ಯುಟಿ ಸ್ಪೀಕರ್ ಖಾಸಿಂ ಸೂರಿ ಸೇರಿದಂತೆ ಇಮ್ರಾನ್ ಜೊತೆಗಿದ್ದವರೆಲ್ಲ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಸಂಸತ್ತಿನಿಂದ ಹೊರನಡೆದರು. ನಾವು ಕಳ್ಳರೊಂದಿಗೆ ಅಸೆಂಬ್ಲಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ನೂತನ ಪ್ರಧಾನಿ ಶೆಹಬಾದ್ ಶರೀಫ್ ಅಧಿಕಾರ ಸ್ವೀಕಾರ ಮಾಡಲಿದ್ದು ಅಧ್ಯಕ್ಷ ಆರಿಫ್ ಅಲಾವಿ ಪ್ರಮಾಣ ವಚನ ಬೋಧಿಸಲಿದ್ದಾರೆ. ದೇಶ ಬಿಟ್ಟು ತೆರಳಿದ್ದ ಮಾಜಿ ಪ್ರಧಾನಿ ನವಾಜ್ ಶರೀಫ್ ಮುಸ್ಲಿಮರ ಈದ್ ಹಬ್ಬದ ಬಳಿಕ ಮುಂದಿನ ತಿಂಗಳು ಲಂಡನ್ನಿಂದ ಮತ್ತೆ ತನ್ನ ದೇಶಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ನವಾಜ್ ಶರೀಫ್, ಪಾಕಿಸ್ಥಾನ ಬಿಟ್ಟು ಇಂಗ್ಲೆಂಡಿಗೆ ತೆರಳಿದ್ದರು. ಐದಾರು ವರ್ಷಗಳಿಂದ ಲಂಡನ್ ನಗರದಲ್ಲಿಯೇ ನೆಲೆಸಿದ್ದರು. ಭ್ರಷ್ಟಾಚಾರದ ಆರೋಪ ಹೊತ್ತಿದ್ದರಿಂದ ಪಾಕಿಸ್ಥಾನಕ್ಕೆ ಬಂದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು.
342 ಸದಸ್ಯ ಬಲದ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಇಮ್ರಾನ್ ಖಾನ್ ಅವರನ್ನು ಕೆಳಕ್ಕಿಳಿಸಲಾಗಿತ್ತು. ಆ ಸಂದರ್ಭದಲ್ಲಿ 174 ಮತಗಳು ಇಮ್ರಾನ್ ವಿರುದ್ಧ ಬಿದ್ದಿದ್ದವು. ಇದೀಗ ಶೆಹಬಾದ್ ಶರೀಫ್ ಪರವಾಗಿಯೂ ಅಷ್ಟೇ ಮತಗಳು ಬಿದ್ದಿವೆ ಎನ್ನಲಾಗುತ್ತಿದೆ. ಪಾಕಿಸ್ಥಾನ್ ತೆಹ್ರೀಕ್ ಇ-ಇನ್ಸಾಫ್ ಪಕ್ಷದ ಸದಸ್ಯರು ಶೆಹಬಾದ್ ವಿರುದ್ಧ ಘೋಷಣೆ ಕೂಗುತ್ತಾ ಸಭೆಯಿಂದ ಹೊರ ನಡೆದಿದ್ದಾರೆ.
Imran Khan was thrown out of office as Pakistan's Prime Minister on Saturday after losing a no-confidence vote in the national assembly. Now, the brother of three-time Prime Minister Nawaz Sharif, Shehbaz, is the main candidate to replace Khan. Stay with IndiaToday.in for LIVE updates on the Pakistan political crisis.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm