ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.
'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm