ಬ್ರೇಕಿಂಗ್ ನ್ಯೂಸ್
24-09-20 10:35 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 24: ಕೊರೋನ ಸೋಂಕಿನಿಂದಾಗಿ ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಗುರುವಾರ ತಿಳಿಸಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಮತ್ತೆ ಹದಗೆಟ್ಟಿರುವುದರಿಂದ ಅವರನ್ನು ಗರಿಷ್ಠ ಜೀವರಕ್ಷಕ ವ್ಯವಸ್ಥ್ತೆಯಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧಾ ಭಾಸ್ಕರನ್ ಅವರು ತಿಳಿಸಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಕೊರೋನ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿದಾಗ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ, ಕೃತಕ ಉಸಿರಾಟ ವ್ಯವಸ್ಥೆಯಲ್ಲಿರಿಸಲಾಗಿತ್ತು
ಸೆಪ್ಟೆಂಬರ್ 19ರಂದು ಅವರ ಪುತ್ರ ಚರಣ್ ಅವರು ಟ್ವೀಟ್ ಮಾಡಿ, ತನ್ನ ತಂದೆ ಜೀವರಕ್ಷಕ ವ್ಯವಸ್ಥೆಯಲ್ಲಿಯೇ ಇರುವರಾದರೂ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರಿಗೆ ಬಾಯಿ ಮೂಲಕ ಆಹಾರ ನೀಡುವುದನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am