ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am