ಬ್ರೇಕಿಂಗ್ ನ್ಯೂಸ್
14-05-22 09:51 pm HK Desk News ದೇಶ - ವಿದೇಶ
ನವದೆಹಲಿ, ಮೇ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಹಾರ ಧಾನ್ಯ ವಸ್ತುಗಳಿಗೆ ಬೇಡಿಕೆ ಹೆಚ್ಚಿರುವುದು ಮತ್ತು ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದಿಢೀರ್ ಆಗಿ ಭಾರತ ಸರಕಾರ ಗೋಧಿ ರಫ್ತುನ್ನು ನಿಷೇಧಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿರುವುದು ಮತ್ತು ನೆರೆಯ ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದರಿಂದ ಭಾರತ ಸರಕಾರ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಆಹಾರ ಭದ್ರತಾ ಕ್ರಮಗಳಿಗಾಗಿ ಗೋಧಿ ರಫ್ತು ಮಾಡುವುದನ್ನ ಬ್ಯಾನ್ ಮಾಡುತ್ತಿರುವುದಾಗಿ ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹೀಗಿದ್ದರೂ, ನೆರೆ ದೇಶಗಳಲ್ಲಿ ತೀವ್ರ ಆಹಾರ ಕೊರತೆ ಎದುರಿಸುತ್ತಿರುವ ರಾಷ್ಟ್ರಗಳಿಗೆ ಭಾರತ ಸರಕಾರದ ಒಪ್ಪಿಗೆ ಮೇರೆಗೆ ಗೋಧಿ ರಫ್ತು ಮಾಡಲು ಬದ್ಧತೆ ಹೊಂದಿದೆ ಎಂದು ಹೇಳಿದೆ. ಗೋಧಿ ಮತ್ತು ಅದರ ಉಪ ಉತ್ಪನ್ನಗಳ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಇದರಿಂದಾಗಿ ಪ್ರಗತಿಶೀಲ ದೇಶಗಳು ತೀವ್ರ ತೊಂದರೆಗೆ ಸಿಲುಕಿವೆ. ಈ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಗೋಧಿಯನ್ನು ಹಿಡಿದಿಟ್ಟು ಮತ್ತಷ್ಟು ದರ ಏರಿಕೆಗೆ ಕಾರಣವಾಗುತ್ತಿವೆ ಎನ್ನಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಏರಿಳಿತ ಮತ್ತು ಭಾರತದಲ್ಲಿ ಆಹಾರ ಭದ್ರತೆ ಉಳಿಸಿಕೊಳ್ಳುವ ಉಪಕ್ರಮದ ಉದ್ದೇಶದಲ್ಲಿ ಗೋಧಿ ರಫ್ತು ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ ಎನ್ನಲಾಗುತ್ತಿದೆ.
![]()
ಭಾರತ 2022-23ರ ಅವಧಿಯಲ್ಲಿ ಹತ್ತು ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡಲು ಗುರಿ ಇರಿಸಿಕೊಂಡಿದೆ. ಅಲ್ಲದೆ, ಎರಡು ದಿನಗಳ ಹಿಂದೆ ವ್ಯಾಪಾರ ಉದ್ದೇಶಕ್ಕಾಗಿ ಇಂಡೋನೇಶ್ಯಾ, ಟ್ಯುನಿಷಿಯಾ ಮತ್ತಿತರ ಪ್ರಗತಿ ಶೀಲ ದೇಶಗಳಿಗೆ ಭಾರತದಿಂದ ಪ್ರತಿನಿಧಿಗಳನ್ನು ಕಳಿಸಿಕೊಡುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಗೋಧಿ ರಫ್ತನ್ನು ನಿಷೇಧ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ಗೋಧಿ ದಾಸ್ತಾನು ಬಹಳಷ್ಟು ಇದ್ದರೂ, ಗೋಧಿ ಹುಡಿಗೆ 2010ರ ಬಳಿಕ ಇದೇ ಮೊದಲ ಬಾರಿಗೆ ದೇಸಿ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ದರ ಆಗಿದೆ. ಎಪ್ರಿಲ್ ತಿಂಗಳಲ್ಲಿ ಗೋಧಿ ಅಟ್ಟಾ ಬೆಲೆ ಗರಿಷ್ಠ ಹಂತಕ್ಕೆ ತಲುಪಿತ್ತು.
India said it would ban wheat exports, in a move that will add to global inflationary pressure and further strain global food supplies that have been disrupted by the war in Ukraine. “The food security of India, neighboring and other vulnerable countries is at risk,” India’s Directorate General of Foreign Trade said in a notice on Friday explaining the ban.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm