ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm