ಬ್ರೇಕಿಂಗ್ ನ್ಯೂಸ್
09-08-22 02:54 pm Source: Vijayakarnataka ಸಿನಿಮಾ
ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬರುತ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ( The Endless One Bhagavan Nityananda ) ಎಂಬ ಹೆಸರಿನ ಹೊಸ ಸಿನಿಮಾವೊಂದು ಬರುತ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ( Vinay Guruji ) ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ವಿನಯ್ ಗುರೂಜಿ ಸಿನಿಮಾ ಬಗ್ಗೆ ಹೇಳಿದ್ದೇನು?
ವಿನಯ್ ಗುರೂಜಿ ಮಾತನಾಡಿ, "ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್‌ನಲ್ಲಿ ಒಂದೇ ತತ್ವ- ಮನುಷ್ಯತ್ವ. ಅಲ್ಲಿ ಮತಕ್ಕೆ ಜಾಗವಿಲ್ಲ. ಮನುಷ್ಯತ್ವಕ್ಕಿಂತ ದೊಡ್ಡ ತತ್ವ ಮತ್ತೊಂದಿಲ್ಲ. ಶಿರಡಿಬಾಬಾ ಸೀರಿಯಲ್ ಬಂದಮೇಲೆ ಬಾಬಾ ಬಗ್ಗೆ ಗೊತ್ತಾಗಿದ್ದು, ಶ್ರೀನಿವಾಸ ಕಲ್ಯಾಣ ಸಿನಿಮಾ ಆದ್ಮೇಲೆ ತಿರುಪತಿ ಬಗ್ಗೆ ಗೊತ್ತಾಯ್ತು. ಅದೇ ರೀತಿ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದಲ್ಲಿ ಹಲವು ವಿಷಯಗಳನ್ನು ಜನರಿಗೆ ತಲುಪಿಸುವ ಕೆಲಸವಾಗಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ಕೃಷ್ಣ ಕೆ ಆರ್ ಹೇಳಿದ್ದೇನು?
ನಿರ್ಮಾಪಕ ಕೃಷ್ಣ ಕೆ.ಆರ್ ಮಾತನಾಡಿ, "ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ನಮ್ಮ ಫ್ಯಾಮಿಲಿ ಭಗವಾನ್ ನಿತ್ಯಾನಂದ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇವೆ. ಈ ಸಿನಿಮಾ ಮಾಡುವ ಮೂಲಕ ಚಿಕ್ಕದೊಂದು ಅಳಿಲು ಸೇವೆ ಮಾಡುತ್ತಿದ್ದೇವೆ" ಎಂದರು.
ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ
ಸಿನಿಮಾಗೆ The endless one ಭಗವಾನ್ ಶ್ರೀ ನಿತ್ಯಾನಂದ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದ್ದು, ಲಕ್ಷ್ಮಸ್ ಸ ಖೋಡೇ ಅವರ ಮರಿ ಮಗ, ಪದ್ಮಾನಾಭ ಸ ಖೋಡೇ ಅವರ ಮೊಮ್ಮಗ ಶ್ರೀಕೃಷ್ಣ ಕೆ ಆರ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗುಲಾಬ್ ಪ್ರೊಡಕ್ಷನ್ ನಡಿಯಲ್ಲಿ ತಯಾರಾಗ್ತಿರುವ ಚೊಚ್ಚಲ ಸಿನಿಮಾ ಇದಾಗಿದ್ದು, ಅದ್ದೂರಿಯಾಗಿ ಚಿತ್ರ ನಿರ್ಮಾಣ ನಿರ್ಮಾಪಕ ಕೃಷ್ಣ ಸಜ್ಜಾಗಿದ್ದು, ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದೆ. ಸದ್ಯದಲ್ಲಿಯೇ ಉಳಿದ ಸ್ಟಾರ್ ಕಾಸ್ಟ್, ತಂತ್ರಜ್ಞಾನರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
ಮನುಷ್ಯತ್ವ-ಪ್ರೀತಿ ಬೋಧಿಸದ ಧರ್ಮ ಗ್ರಂಥಗಳಿಲ್ಲ! ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿದ ವಿನಯ್ ಗುರೂಜಿ.
Vinay Guruji Support The Endless One Bhagavan Nityananda Movie.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm