ಬ್ರೇಕಿಂಗ್ ನ್ಯೂಸ್
15-08-22 03:50 pm Source: Vijayakarnataka ಸಿನಿಮಾ
'ರಾಷ್ಟ್ರ ಪ್ರಶಸ್ತಿ' ಪುರಸ್ಕೃತ ನಿರ್ದೇಶಕ ಮಂಸೋರೆ ( Mansore ) ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರುತ್ತಿದ್ದಾರೆ. 'ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಚಿತ್ರತಂಡ ವಿಶೇಷವಾದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಒಂದು ಪೋಸ್ಟರ್ ಅನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.
'ಜೈ ಭೀಮ್', 'ಜನಗಣಮನ' ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ.
'ಆ್ಯಕ್ಟ್-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು , ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರುಮುಗಂ ಸಂಕಲನವಿದೆ.

ಚಿತ್ರಕಥೆಯಲ್ಲಿ ಮಂಸೋರೆ ಜೊತೆಗೆ ವೀರೇಂದ್ರ ಮಲ್ಲಣ್ಣ ಲೇಖನಿ ಹಂಚಿಕೊಂಡಿದ್ದರೆ, ಸಂಭಾಷಣೆಗಳ ಬರವಣಿಗೆಯಲ್ಲಿ ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿದ್ದಾರೆ.
![]()
ಅಂದಹಾಗೆ ಇದು ಮಂಸೋರೆ ಅವರ 4ನೇ ಸಿನಿಮಾ. ಈ ಬಗ್ಗೆ ಹಿಂದೆ ಮಾತನಾಡಿದ್ದ ಮಂಸೋರೆ ಅವರು, "ಇದು ಹೊಸ ಸಿನಿಮಾ, ಹೊಸ ಪ್ರಯತ್ನವೊಂದರ ಬೆನ್ನತ್ತಿ ಹೊರಟಿದ್ದೇವೆ. ಆದರೆ ಇದು ಕನಸಲ್ಲ, ಕತೆಯಲ್ಲ, ಸತ್ಯ ಘಟನೆ ಆಧಾರಿತವಾದುದು. ಬಹಳ ಹಿಂದೆಯೇ ಸಿನಿಮಾ ಮಾಡಬೇಕು ಅಂದುಕೊಂಡಿದ್ದ ಒಂದು ಘಟನೆಯು ದೃಶ್ಯರೂಪ ಪಡೆದುಕೊಳ್ಳಲು ಈಗ ಕಾಲ ಕೂಡಿಬಂದಿದೆ. ಹತ್ತೊಂಬತ್ತು, ಇಪ್ಪತ್ತು, ಇಪ್ಪತ್ತೊಂದು..." ಎಲ್ಲರ ಬದುಕಿಗೆ ಬಹಳ ಮುಖ್ಯವಾದ ಸಂಖ್ಯೆಗಳು.. ಅದು ಏನು? ಹೇಗೆ? ಎಂಬುವ ಪ್ರಶ್ನೆಗಳಿಗೆ ಉತ್ತರ ಈ ಚಿತ್ರದಲ್ಲಿದೆ" ಎಂದಿದ್ದಾರೆ.
National Award Winner Director Mansore Release 19 20 21 Movie Poster.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm