Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್‌ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್‌ಟೇನ್‌ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್‌ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್‌ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm