ಬ್ರೇಕಿಂಗ್ ನ್ಯೂಸ್
09-09-22 03:58 pm Source: Vijayakarnataka ಸಿನಿಮಾ
ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ನಟರಲ್ಲಿ 'ಡಾಲಿ' ಧನಂಜಯ್ ಕೂಡ ಒಬ್ಬರು. ಒಂದಾದ ಮೇಲೊಂದು ಸಿನಿಮಾ ಮಾಡುತ್ತ, ಸದಾ ಬ್ಯುಸಿ ಇರುವ ಧನಂಜಯ್ ಹಲವು ಸಿನಿಮಾಗಳ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಅವರ ಸಾಲು ಸಾಲು ಸಿನಿಮಾಗಳ ರಿಲೀಸ್ ಡೇಟ್ ಘೋಷಣೆ ಆಗುತ್ತಲೇ ಇದೆ. ಈ ಮಧ್ಯೆ ಧನಂಜಯ್ ನಟನೆಯ ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಘೋಷಣೆ ಆಗಿದೆ. ಹೌದು, ಧನು ಅವರ 'ಹೊಯ್ಸಳ' ಸಿನಿಮಾವು ಶ್ರೀರಾಮನವಮಿಯ (ಮಾರ್ಚ್ 30) ಶುಭದಿನದಂದು ತೆರೆಕಾಣಲಿದೆ.
'ಹೊಯ್ಸಳ' ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
ಈ ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಈಗ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಧನಂಜಯ್ ನಾಯಕತ್ವದಲ್ಲಿ 'ರತ್ನನ್ ಪ್ರಪಂಚ' ಸಿನಿಮಾವನ್ನು ನಿರ್ಮಿಸಿದ್ದ ಕೆಆರ್‌ಜಿ ಸ್ಟುಡಿಯೋಸ್ ಈ ಸಿನಿಮಾವನ್ನು ಕೂಡ ನಿರ್ಮಾಣ ಮಾಡುತ್ತಿದೆ. 'ಹೊಯ್ಸಳ' ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ 'ಗೀತಾ' ಚಿತ್ರವನ್ನು ವಿಜಯ್ ನಾಗೇಂದ್ರ ಈಗ 'ಹೊಯ್ಸಳ' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಜನೀಶ್ ಲೋಕನಾಥ್ ಆವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಧನಂಜಯ್‌ಗೆ ಅಮೃತಾ ಅಯ್ಯಂಗಾರ್ ನಾಯಕಿ
ಧನಂಜಯ್ ಜೊತೆಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪಾಪ್‌ಕಾರ್ನ್ ಮಂಕಿ ಟೈಗರ್, ಬಡವ ರಾಸ್ಕಲ್ ನಂತರ ಮೂರನೇ ಬಾರಿಗೆ ಈ ಜೋಡಿ ಒಂದಾಗಿದೆ. ಉಳಿದಂತೆ, ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, 'ಕೆಜಿಎಫ್' ಖ್ಯಾತಿಯ ಅವಿನಾಶ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. 'ಕೆಜಿಎಫ್', 'ಸಲಾರ್' ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. 'ಹೊಯ್ಸಳ' ಚಿತ್ರದ ಸಾಹಸ ಸನ್ನಿವೇಶಗಳನ್ನು ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಸಂಯೋಜನೆ ಮಾಡಲಿದ್ದಾರೆ.
'ಡಾಲಿ' ಕೈಯಲ್ಲಿ ಹಲವು ಸಿನಿಮಾಗಳು
ಸದ್ಯ 'ಹೊಯ್ಸಳ' ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಧನಂಜಯ್, ಇದರ ಮಧ್ಯೆ ರಿಲೀಸ್ ಆಗುತ್ತಿರುವ ತಮ್ಮ ಸಿನಿಮಾಗಳ ಪ್ರಮೋಷನ್ ಕೂಡ ಮಾಡುತ್ತಿದ್ದಾರೆ. ಸೆ.16ರಂದು ಧನಂಜಯ್, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾವು ತೆರೆಗೆ ಬರುತ್ತಿದೆ. ಆನಂತರ ಸೆ.30ರಂದು ಜಗ್ಗೇಶ್ ಜೊತೆಗೆ ಧನಂಜಯ್ ನಟಿಸಿರವ 'ತೋತಾಪುರಿ' ಸಿನಿಮಾ ಕೂಡ ರಿಲೀಸ್ ಆಗಲಿದೆ. ಅಕ್ಟೋಬರ್ ಮೂರನೇ ವಾರದಲ್ಲಿ ಧನಂಜಯ್ ನಿರ್ಮಿಸಿ, ನಟಿಸಿರುವ 'ಹೆಡ್ ಬುಷ್' ಕೂಡ ಗ್ರ್ಯಾಂಡ್ ಆಗಿ ತೆರೆಕಾಣಲಿದೆ. ಇದರ ಜತೆಗೆ 'ಒನ್ಸ್ ಅಪನ್ ಎ ಟೈಮ್ ಇನ್ ಜಮಾಲಿಗುಡ್ಡ' ಸಿನಿಮಾ ಕೂಡ ರಿಲೀಸ್ ಆಗಲು ಸಜ್ಜಾಗಿದೆ. ಇಷ್ಟು ಸಿನಿಮಾಗಳ ಜೊತೆಗೆ ಪರಭಾಷೆಯಲ್ಲೂ ಧನಂಜಯ್ ಸಖತ್ ಬ್ಯುಸಿ ಇದ್ದಾರೆ.
Dhananjay Amrutha Iyengar Starrer Hoysala Movie Will Release On March 30th.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm