ಬ್ರೇಕಿಂಗ್ ನ್ಯೂಸ್
24-10-22 01:38 pm Source: Vijayakarnataka ಸಿನಿಮಾ
‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ( Ajay Rao ) ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ( Bank Of Bhagyalakshmi ). ಇದು ಎಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.
'ಬ್ಯಾಂಕ್ ಆಫ್ ಭಾಗ್ಯಲಕ್ಷಿ' ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಎಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್‌ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', ‘ಬಹುಪರಾಕ್' ಮತ್ತು ‘ಆಪರೇಷನ್ ಅಲಮೇಲಮ್ಮ' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.
ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
Actor Ajay Rao Starrer Bank Of Bhagyalakshmi Movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm